ನರಹರಿ ಪರ್ವತ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಮಹಾಕಾರ್ಯಕ್ಕೆ ಸಂಬಂಧಿಸಿ ಭಕ್ತರ ಸಮಾಲೋಚನಾ ಸಭೆ ಮಾರ್ಚ್ 19ರಂದು ಸಂಜೆ 3 ಗಂಟೆಗೆ ನರಹರಿ ಪರ್ವತ ಸದಾಶಿವ ದೇವಸ್ಥಾನದ ಸಾನಿಧ್ಯದಲ್ಲಿ ನಡೆಯಲಿದೆ.
ಪ್ರಕೃತಿ ರಮಣೀಯ ತಾಣವಾಗಿ ಪ್ರವಾಸಿಗರನ್ನು ಕೈಬೀಸಿ ಕರೆಯುವ ನರಹರಿ ಪರ್ವತದಲ್ಲಿರುವ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಕೈಜೋಡಿಸಲು ಸುತ್ತಮುತ್ತಲಿನ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ, ಸೂಕ್ತ ಸಲಹೆ, ಮಾರ್ಗದರ್ಶನ ನೀಡಬೇಕು ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಪ್ರಶಾಂತ ಮಾರ್ಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಆತ್ಮರಂಜನ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment on "ನರಹರಿ ಜೀರ್ಣೋದ್ಧಾರ: 19ರಂದು ಸಮಾಲೋಚನಾ ಸಭೆ"