ಬ್ಯಾರಿ ಭಾಷೆಯ ಬಗ್ಗೆ ಅಧ್ಯಯನ ನಡೆಸಲು ಅನುಕೂಲವಾಗುವಂತೆ ಮಂಗಳೂರು ವಿಶ್ವವಿದ್ಯಾನಿಲಯ (ಮಂಗಳ ಗಂಗೋತ್ರಿ) ದಲ್ಲಿ ಬ್ಯಾರಿ ಅಧ್ಯಯನ ಪೀಠ ಸ್ಥಾಪನೆಯನ್ನು ಬಜೆಟ್‌ನಲ್ಲಿ ಘೋಷಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರುಗಳಾದ ಅಬ್ದುಲ್ ಲತೀಫ್ ನೇರಳಕಟ್ಟೆ, ಅಬ್ದುಲ್ ಹಮೀದ್ ಗೋಳ್ತಮಜಲು, ಝಕರಿಯಾ ಕಲ್ಲಡ್ಕ, ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ದ.ಕ. ಮತ್ತು ಉಡುಪಿ ಜಿಲ್ಲಾ ದಫ್ ಎಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು ಅವರು ಅಭಿನಂದನೆ ಸಲ್ಲಿಸಿದ್ದಾರೆ.