ಇರಾ ತಾಳಿತ್ತಬೆಟ್ಟು ಶಾಲೆಯಲ್ಲಿ ಇಂಟರ್ ಲಾಕ್ ಅಳವಡಿಕೆ, ಕೈತೊಳೆಯುವ ಘಟಕ ಉದ್ಘಾಟನೆ

 ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿಯಲ್ಲಿ 2011-12ನೇ ಸಾಲಿನ ಜಿಲ್ಲಾ ಮಟ್ಟದ ಸ್ವಚ್ಛ ಶಾಲೆ ಪ್ರಶಸ್ತಿ ಪಡೆದ ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ ಇರಾದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿಯ ಮೊತ್ತ 50 ಸಾವಿರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಕೈ ತೊಳೆಯುವ ಘಟಕವನ್ನು ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಉದ್ಘಾಟಿಸಿದರು.

ಈ ಸಂದರ್ಭ ಜಗನ್ನಾಥ ಪಕ್ಕಳ ಇರಾ ತಾಳಿತ್ತಬೆಟ್ಟು ಶಾಲೆಗೆ ತಮ್ಮ ತಂದೆ ತಾಯಿಯವರ ನೆನಪಿನಲ್ಲಿ ನೀಡಿದ ಇಂಟರ್‌ಲಾಕ್ ಅಳವಡಿಕೆಯನ್ನು ಉದ್ಘಾಟಿಸಲಾಯಿತು. ಸ್ವಚ್ಛ ಭಾರತ್ ಮಿಷನ್‌ನ ನೋಡೆಲ್ ಅಧಿಕಾರಿ ನವೀನ್, ಇರಾಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಚಂದ್ರಾವತಿ ಎ.ಕರ್ಕೇರ, ಪಂಚಾಯತ್ ಪ್ರಭಾರ ಅಭಿವೃಧ್ದಿ ಅಧಿಕಾರಿ ನಳಿನಿ ಪ್ರಶಸ್ತಿ ಪಡೆಯಲು ಪರಿಶ್ರಮಿಸಿದ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮುರಳಿಧರ್ ನಿವೃತ್ತ ಮುಖ್ಯೋಪಾಧ್ಯಾಯಿನಿ ಕೃಷ್ಣಮ್ಮ ದಾನಿಗಳಾದ ವಾಮನ ಪೂಜಾರಿ ಶಾಲಾ ಮುಖ್ಯ ಶಿಕ್ಷಕಿ ಸುಜಾತ ಟಿ.ಎಸ್, ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ ಸದಸ್ಯರು,ಪೋಷಕರು ಮಕ್ಕಳು ಉಪಸ್ಥಿತರಿದ್ದರು.

ಜಾಹೀರಾತು

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕೈತೊಳೆಯುವ ಘಟಕಕ್ಕೆ ಟೈಲ್ಸ್ ಅಳವಡಿಸಲು ನೆರವಾದ ವಾಮನ ಪೂಜಾರಿ ಇರಾ ಹಾಗೂ ಇಂಟರ್ ಲಾಕ್ ಅಳವಡಿಕೆಗೆ ನೆರವಾದ ಜಗನ್ನಾಥ ಪಕ್ಕಳರನ್ನು ಇರಾ ಶಾಲಾ ಪರವಾಗಿ ಸನ್ಮಾನಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮುರಳಿಧರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶ್ರೀಮತಿ ಶಶಿ.ಬಿ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಸುಜಾತ ಟಿ.ಎಸ್ ಪ್ರಾಸ್ತಾವಿಕ ಮಾತನಾಡಿದರು.

ಸಹ ಶಿಕ್ಷಕಿ ಮಿನೋರ ರೋಸಿ ವಂದಿಸಿದರು. ಸಹ ಶಿಕ್ಷಕ ಜೋನ್ ಫೆರ್ನಾಂಡಿಸ್ ಸನ್ಮಾನ ಕಾರ್ಯಕ್ರಮ ನಿರ್ವಹಿಸಿ ಪದವೀಧರ ಶಿಕ್ಷಕಿ ಸೌಮ್ಯ ಹೆಚ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಇರಾ ತಾಳಿತ್ತಬೆಟ್ಟು ಶಾಲೆಯಲ್ಲಿ ಇಂಟರ್ ಲಾಕ್ ಅಳವಡಿಕೆ, ಕೈತೊಳೆಯುವ ಘಟಕ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*