ಅಕ್ರಮ ಮರಳುಗಾರಿಕೆ ವಿರುದ್ಧ ಬಂಟ್ವಾಳ ಪೊಲೀಸರ ಕಾರ್‍ಯಾಚರಣೆ ಮುಂದುವರಿದಿದೆ. ಕಲ್ಲಡ್ಕ ಸಮೀಪ ನೆಟ್ಲ ರಸ್ತೆಯಲ್ಲಿ ಪರವಾನಗಿ ಇಲ್ಲದೆ ಸಂಚರಿಸುತ್ತಿದ್ದ ಮರಳು ಸಾಗಾಟದ ಟಿಪ್ಪರ್ ಅನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಮಹಮ್ಮದ್ ಉನೇಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಶುಕ್ರವಾರವಷ್ಟೇ ಬರಿಮಾರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದುದನ್ನು ಪೊಲೀಸರು ಪತ್ತೆಹಚ್ಚಿ ಸುಮಾರು ೧೦ ಲಕ್ಷ ರೂ ಮೌಲ್ಯದ ಮರಳು ವಶಕ್ಕೆ ತೆಗೆದುಕೊಂಡಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)