ವಂಚನೆ ಪ್ರಕರಣದಲ್ಲಿ ನ್ಯಾಯಾಲಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬೋಳಂತೂರು ಗ್ರಾಮದ ಸುರಿಬೈಲು ಬಿರುಕೋಡಿ ನಿವಾಸಿ ನಳಿನಿ(53) ಎಂಬಾಕೆಯನ್ನು ವಿಟ್ಲ ಪೊಲೀಸರು ಠಾಣೆಯ ಸಮೀಪ ಶುಕ್ರವಾರ ಬಂಧಿಸಲಾಗಿದೆ.
ಫೈನಾನ್ಸ್ ಸಂಸ್ಥೆಯನ್ನು ಸ್ಥಾಪಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಕೇಸ್ ಗಳಲ್ಲಿ ಈಕೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣವಿತ್ತು.
ಆರೋಪಿ ಪತ್ತೆ ಬಗ್ಗೆ ಡಿಎಸ್ಪಿ ರವೀಶ್ ಸಿ.ಆರ್. ಸಿಪಿಐ ಮಂಜಯ್ಯ ಅವರ ಮಾರ್ಗದರ್ಶನದಲ್ಲಿ ವಿಟ್ಲ ಪೊಲೀಸ್ ಸಿಬ್ಬಂದಿಗಳಾದ ಇಬ್ರಾಹಿಂ, ಪ್ರವೀಣ್, ರಕ್ಷಿತ್, ಚಿತ್ರಲೇಖ ಪಾಲ್ಗೊಂಡಿದ್ದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ೫ಸಾವಿರ ರೂ ದಂಡ ವಿಧಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ"
Be the first to comment on "ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ"