ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್‌ಕ್ಲಬ್ ಹಾಗೂ ಬಂಟ್ವಾಳ ಪತ್ರಕರ್ತರ ಸಂಘದ ರಜತ ವರ್ಷಾಚರಣಾ ಸಮಿತಿ ಆಶ್ರಯದಲ್ಲಿ ವಿಚಾರ ಸಂಕಿರಣ ಹಾಗೂ ರಜತ ವರ್ಷಾಚರಣೆಯ ಸಮಾರೋಪ ಸಂಭ್ರಮ ಮಾ.21ರಂದು ಮಂಗಳವಾರ ಬೆಳಗ್ಗೆ ಬಿ.ಸಿ.ರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ಜರಗಲಿದೆ.
ಹಿರಿಯ ಪತ್ರಕರ್ತ ರಂಗನಾಥ್ ಭಾರಧ್ವಾಜ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ರಜತ ವರ್ಷಾಚರಣಾ ಸಮಿತಿ ಗೌರವಾಧ್ಯಕ್ಷ ಬಾಲಕೃಷ್ಣ ಗಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಮಂಗಳೂರು ಪ್ರೆಸ ಕ್ಲಬ್ ಅಧ್ಯಕ್ಷ ಡಾ.ರೊನಾಲ್ಡ್ ಅನಿಲ್ ಫೆರ್ನಾಂಡಿಸ್,ಬಂಟ್ವಾಳ ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅತಿಥಿಗಳಾಗಿ ಭಾಗವಹಿಸುವರು.
ಇದೇ ವೇಳೆ ನಡೆಯಲಿರುವ ವಿಚಾರ ಸಂಕಿರಣದಲ್ಲಿ ಮಾಧ್ಯಮ-ಭವಿಷ್ಯದ ಸವಾಲುಗಳು ಕುರಿತು ದೃಶ್ಯ ಮಾಧ್ಯಮ ಮತ್ತು ಶ್ರವಣ ಮಾಧ್ಯಮ ವಿಷಯದಲ್ಲಿ ನಿರೂಪಕಿ ನವಿತಾ ಜೈನ್ ಅವರು ಹಾಗೂ ಮುದ್ರಣ ಮಾಧ್ಯಮ ಮತ್ತು ಅಂತರ್ಜಾಲ ಮಾಧ್ಯಮ ವಿಷಯದಲ್ಲಿ ಬಿ.ವೆಂಕಟಸಿಂಗ್ ಅವರು ಮಾತನಾಡಲಿರುವರು.
ಮಧ್ಯಾಹ್ನ ರಜತ ವರ್ಷಾಚರಣೆಯ ಸಮಾರೋಪ ನಡೆಯಲಿದ್ದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್.ರಾಜು ಸಮಾರೋಪ ಭಾಷಣ ಮಾಡಲಿರುವರು. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ ಅಧ್ಯಕ್ಷತೆ ವಹಿಸಲಿರುವರು. ರಾಜ್ಯ ಅರಣ್ಯ ಸಚಿಚ ಬಿ.ರಮಾನಾಥ ರೈ ಅವರು ಪೂರ್ವಾಧ್ಯಕ್ಷರುಗಳನ್ನು ಸಮ್ಮಾನಿಸುವರು. ಪ್ರಗತಿಪರ ಕೃಷಿಕ ರಾಜೇಶ್ ನಾಕ್ ಉಳಿಪಾಡಿಗುತ್ತು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ರಜತ ವರ್ಷಾಚರಣಾ ಸಮಿತಿ ಅಧ್ಯಕ್ಷ ಇಬ್ರಾಹಿಂ ಅಡ್ಕಸ್ಥಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ.ಬೊರಸೆ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
Be the first to comment on "ರಜತವರ್ಷಾಚರಣೆ ಸಮಾರೋಪ, ವಿಚಾರಸಂಕಿರಣ"