ಬಂಟ್ವಾಳ ತಾಲೂಕಿನ ಬಂಟ್ವಾಳ ಹೋಬಳಿಯ ಕಾಡಬೆಟ್ಟು ಗ್ರಾಮದ ಕೆಳಗಿನ ವಗ್ಗ ಎಂಬಲ್ಲಿನ ಗ್ರಾಪಂ ಸದಸ್ಯೆ ಸುಜಾತ ಎಂಬವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ಗುರುವಾರ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದ ಅನಾಹುತ ಆಗಿರಬಹುದು ಎಂದು ಶಂಕಿಸಲಾಗಿದೆ.
ಘಟನೆಯಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಕಂದಾಯ ನಿರೀಕ್ಷಕ ನವೀನ್, ಸಿಬ್ಬಂದಿ ವಾಸುದೇವ, ಸ್ಥಳೀಯ ಗ್ರಾಪಂ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
Be the first to comment on "ಆಕಸ್ಮಿಕ ಬೆಂಕಿ"