ಗೋಲ್ಡನ್ ಸ್ಟಾರ್ ಎಂದೇ ಖ್ಯಾತರಾದ ಮುಂಗಾರು ಮಳೆಯಿಂದ ಪ್ರಸಿದ್ಧರಾದ ಚಲನಚಿತ್ರ ನಟ ಗಣೇಶ್ ಗುರುವಾರ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು.

Photos: Kishore Peraje, Namma Studio, Krishnanand Complex, B.C.Road
ಈ ಸಂದರ್‍ಭ ವಿದ್ಯಾರ್‍ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಧನಾತ್ಮಕ ಚಿಂತನೆ ಮೈಗೂಡಿಸಿ ಎಂದರು. ಉತ್ತಮ ವಿಚಾರಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಜನೆ ಮಾಡಿದರೆ ಉತ್ತಮ ಜೀವನ ರೂಪಿಸಲು ಸಾಧ್ಯವಾಗಲಿದೆ. ಮಾನವೀಯ ಮೌಲ್ಯಗಳನ್ನು ಹಾಗೂ ದೇಶೀಯ ಸಂಸ್ಕೃತಿಯನ್ನೊಳಗೊಂಡ ಶ್ರೀರಾಮ ವಿದ್ಯಾ ಕೇಂದ್ರದ ಶಿಕ್ಷಣ ಪದ್ಧತಿ ನನಗೆ ಅತೀವ ಸಂತೋಷ ತಂದಿದೆ. ಶಿಸ್ತು, ಆಚಾರ, ವಿಚಾರ, ಸಂಸ್ಕೃತಿ, ನಮ್ಮತನ, ಜೀವನ ಪದ್ಧತಿಗೆ ಒತ್ತು ನೀಡುತ್ತಿರುವುದು ಇತರ ವಿದ್ಯಾ ಸಂಸ್ಥೆಗಳಿಗೆ ಮಾದರಿಯಾಗಿದೆ .ಇಲ್ಲಿನ ವಿದ್ಯಾ ಸಂಸ್ಥೆ ಜೀವನ ಮೌಲ್ಯವನ್ನು ಒದಗಿಸುತ್ತದೆ ಎಂದರು.
ರಾಜ್ಯ ಅಲ್ಪ ಸಂಖ್ಯಾತ ಮೋರ್ಚದ ಉಪಾಧ್ಯಕ್ಷ ರಹೀಂ ಉಚ್ಚಿಲ್ ಮಾತನಾಡಿ, ಕರಾವಳಿ ಜಿಲ್ಲೆಯಲ್ಲಿ ಶಾಂತಿ ನೆಮ್ಮದಿ, ಸಮಾಧಾನ, ತೃಪ್ತಿ ನೀಡುವ ವಿದ್ಯಾ ಕೇಂದ್ರವೆಂದರೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರವಾಗಿದೆ. ಇದು ವಿಶೇಷ ಶಕ್ತಿಯುಳ್ಳ ಕೇಂದ್ರ ಎಂದರು.
ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಆಶ್ರಫ್ ಉಚ್ಚಿಲ, ಶ್ರೀರಾಮ ವಿದ್ಯಾಕೇಂದ್ರ ಸಂಚಾಲಕ ವಸಂತ ಮಾಧವ, ಡಾ. ಕಮಲ ಪ್ರಭಾಕರ್ ಭಟ್ ಉಪಸ್ಥಿತರಿದ್ದರು. ಪ್ರಾಂಶುಪಾಲ ಕೃಷ್ಣ ಪ್ರಸಾದ್ ಸ್ವಾಗತಿಸಿ ವಂದಿಸಿದರು.
Be the first to comment on "ಗೋಲ್ಡನ್ ಸ್ಟಾರ್ ಗಣೇಶ್ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಭೇಟಿ"