ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬೆಂಗಳೂರಿನಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರನ್ನು ಭೇಟಿ ಮಾಡಿ, ಪಶ್ಚಿಮ ವಾಹಿನಿ ಯೋಜನೆ ಅನುಷ್ಠಾನದ ಕುರಿತು ಕೂಡಲೇ ಗಮನಹರಿಸುವಂತೆ ಮನವಿ ಮಾಡಿದ್ದಾರೆ.
ವಿಧಾನಸೌಧದ ಮೊಗಸಾಲೆಯಲ್ಲಿ ಅನೌಪಚಾರಿಕವಾಗಿ ಮಾತುಕತೆ ಮಾಡಿದ ಸಂದರ್ಭ ಈ ವಿಷಯ ಪ್ರಸ್ತಾಪಿಸಿದ ರೈ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ನೀಗಿಸಲು ಪಶ್ಚಿಮ ವಾಹಿನಿ ಅನುಷ್ಠಾನದ ಅಗತ್ಯವನ್ನು ಒತ್ತಿ ಹೇಳಿದರು. ಇದೇ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉನ್ನತ ಮಟ್ಟದ ಸಭೆಯೊಂದನ್ನು ಕರೆದು, ಯೋಜನೆ ಅನುಷ್ಠಾನದ ಕುರಿತು ಪರಾಮರ್ಶೆ ನಡೆಸುವಂತೆ ಸಚಿವ ಜಯಚಂದ್ರ ಅವರನ್ನು ರೈ ಆಹ್ವಾನಿಸಿದರು.
ಜಿಲ್ಲೆಗೆ ಸಣ್ಣ ನೀರಾವರಿ ಇಲಾಖೆಯಿಂದ ತಡೆಗೋಡೆ ರಚಿಸಲು ಹೆಚ್ಚುವರಿ ಅನುದಾನವನ್ನೂ ನೀಡಬೇಕು ಎಂದು ರಮಾನಾಥ ರೈ ಆಗ್ರಹಿಸಿದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)