ಏರ್ಯ ಉದ್ಘಾಟನೆ, ಡಾ. ಪುಂಡಿಕಾಯಿ ಅಧ್ಯಕ್ಷತೆ

ಸಿದ್ಧಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಠಾರದ ಏರ್ಯ ಚಂದ್ರಭಾಗಿ ರೈ ಸಭಾಂಗಣದ ಐ.ಕೃಷ್ಣರಾಜ ಬಲ್ಲಾಳ್ ವೇದಿಕೆಯಲ್ಲಿ ಮಾ.೨೫ರಂದು ಬಂಟ್ವಾಳ ತಾಲೂಕು ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಇದಕ್ಕಾಗಿ ಸಿದ್ಧತೆಗಳು ಸಾಗಿವೆ ಎಂದು ಕಸಾಪ ತಾಲೂಕು ಅಧ್ಯಕ್ಷ ಕೆ.ಮೋಹನ ರಾವ್ ಮತ್ತು ಸ್ವಾಗತ ಸಮಿತಿ ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ
ಬೆಳಗ್ಗೆ ಗಂಟೆ ೮.೩೦ ಕ್ಕೆ ಸೈಂಟ್ ಪ್ಯಾಟ್ರಿಕ್ ಹಿರಿಯ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ಆಕರ್ಷಕ ಮೆರವಣಿಗೆ ನಡೆಯಲಿದ್ದು ಸಂಗಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಗುಲಾಬಿ ಉದ್ಘಾಟಿಸಲಿರುವರು. ಕುಕ್ಕಿಪಾಡಿ ಗ್ರಾ.ಪಂ.ಅಧ್ಯಕ್ಷ ದಿನೇಶ ಸುಂದರ ಶಾಂತಿ ಅವರು ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವರು.
ಗಂಟೆ ೯ಕ್ಕೆ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ ಅವರು ರಾಷ್ಟ್ರ ಧ್ವಜಾರೋಹಣ ಮಾಡಲಿರುವರು. ಜಿ.ಪಂ.ಸದಸ್ಯ ಎಂ. ತುಂಗಪ್ಪ ಬಂಗೇರ ಅವರು ಕನ್ನಡ ಧ್ವಜಾರೋಹಣ ಮಾಡುವರು. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಪರಿಷತ್ ಧ್ವಜಾರೋಹಣ ಮಾಡಲಿರುವರು.
ಗಂಟೆ ೯.೩೦ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಸಮ್ಮೇಳನ ಉದ್ಘಾಟಿಸುವರು. ಅರಣ್ಯ ಸಚಿವ ಬಿ.ರಮಾನಾಥ ರೈ ದೀಪ ಪ್ರಜ್ವಲಿಸುವರು. ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಮೋಹನ್ ರಾವ್ ಅವರು ಆಶಯ ನುಡಿ ನೀಡುವರು. ವಿಶ್ರಾಂತ ಪ್ರಾಧ್ಯಾಪಕ,ಲೇಖಕ ಡಾ. ಪುಂಡಿಕಾ ಗಣಪಯ್ಯ ಭಟ್ ಸಮ್ಮೇಳನದ ಅಧ್ಯಕ್ಷತೆ ವಹಿಸುವರು. ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್ ಪುಸ್ತಕ ಪ್ರದರ್ಶನ ಉದ್ಘಾಟಿಸುವರು. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ದ.ಕ.ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಕಾರಿ ಡಾ.ಎಂ.ಆರ್. ರವಿ ಅವರು ಪುಸ್ತಕಗಳನ್ನು ಬಿಡುಗಡೆಗೊಳಿಸುವರು. ವಿಧಾನ ಪರಿಷತ್ತು ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜ ಅವರು ಪ್ರೌಢಶಾಲಾ ಸೋಲಾರ್ ವ್ಯವಸ್ಥೆ ಅನಾವರಣಗೊಳಿಸುವರು. ವಿಶ್ರಾಂತ ಕುಲಪತಿ, ಜಾನಪದ ವಿದ್ವಾಂಸ,ಡಾ.ಕೆ.ಚಿನ್ನಪ್ಪ ಗೌಡ ಅವರು ನಿಕಟ ಪೂರ್ವ ಸಮ್ಮೇಳನಾಧ್ಯಕ್ಷರ ಮಾತುಗಳನ್ನಾಡುವರು. ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕೋಶಾಕಾರಿ ಡಾ. ಅಜಕ್ಕಳ ಗಿರೀಶ್ ಭಟ್ ಅವರು ಸಮ್ಮೇಳನಾಧ್ಯಕ್ಷರ ಕೃತಿಗಳ ಅವಲೋಕನ ಮಾಡುವರು. ತಾಲೂಕು ಅಕ್ರಮ ಸಕ್ರಮ ಸಮತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲಿಯಾನ್, ಸಿದ್ಧಕಟ್ಟೆ ಸೈಂಟ್ ಪ್ಯಾಟ್ರಿಕ್ ಚರ್ಚ್‌ನ ಧರ್ಮಗುರು ಫಾ.ಆಂಟೊನಿ ಲಸ್ರಾದೊ, ಬಂಟ್ವಾಳ ಕ್ಷೇತ್ರ ಶಿಕ್ಷಣಾಕಾರಿ ಲೋಕೇಶ್ ಸಿ. ಡಾ. ಪ್ರಭಾಚಂದ್ರ ಜೈನ್, ಎಪಿಎಂಸಿ ಸದಸ್ಯ ಪದ್ಮರಾಜ ಬಲ್ಲಾಳ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮಧ್ಯಾಹ್ನ ೧೨.೩೦ರಿಂದ ಸಿದ್ಧಕಟ್ಟೆ ಸೈಂಟ್ ಪ್ಯಾಟ್ರಿಕ್ ಆಂಗ್ಲಮಾಧ್ಯಮ ಶಾಲೆ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮ. ಗಂಟೆ ೧೨.೪೫ರಿಂದ ಕಲೆ-ಸಾಹಿತ್ಯಕ್ಕೆ ಸಿದ್ಧಕಟ್ಟೆಯ ಕೊಡುಗೆ ಕಾರ್ಯಕ್ರಮದಲ್ಲಿ ಡಾ|ಯೋಗೀಶ್ ಕೈರೋಡಿ ಅವರು ಗೋಷ್ಠಿ ನಡೆಸುವರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಪದ್ಮನಾಭ ರೈ, ರೋಟರಿ ಸಮುದಾಯ ದಳದ ಅಧ್ಯಕ್ಷ ಡಾ.ಕೃಷ್ಣಮೂರ್ತಿ ಅವರು ಉಪಸ್ಥಿತರಿರುವರು. ಬಳಿಕ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ ಗಂಟೆ ೧.೨೦ರಿಂದ ಯಕ್ಷಗಾನ ಸಾಹಿತ್ಯ ಅರ್ಥದಾರಿ, ಲೇಖಕ ರಾಧಾಕೃಷ್ಣ ಕಲ್ಚಾರ್ ಗೋಷ್ಠಿ ನಡೆಸಿಕೊಡುವರು. ತಾ.ಪಂ.ಕಾರ್ಯನಿರ್‍ವಹಣಾಕಾರಿ ಸಿಪ್ರಿಯಾನ್ ಮಿರಾಂದ, ಸಾಮಾಜಿಕ, ಧಾರ್ಮಿಕ ಕಾರ್ಯಕರ್ತ ಕೆಯ್ಯೂರು ನಾರಾಯಣ ಭಟ್ ಅವರು ಉಪಸ್ಥಿತರಿರುವರು.
ಮಧ್ಯಾಹ್ನ ಗಂಟೆ ೨ರಿಂದ ಸಾಹಿತ್ಯ ಪ್ರಸ್ತುತಿ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ.ನರಸಿಂಹ ಮೂರ್ತಿ ಅವರು ಅಧ್ಯಕ್ಷತೆ ವಹಿಸುವರು. ತಾಲೂಕಿನ ವಿವಿಧ ಕವಿಗಳು, ಕಥೆಗಾರರು, ಲೇಖಕರು ಭಾಗವಹಿಸಲಿರುವರು. ತಾ.ಪಂ.ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಸಿದ್ಧಕಟ್ಟೆ ಹಾ.ಉ.ಸ.ಸಂಘದ ಅಧ್ಯಕ್ಷ ಸದಾಶಿವ ಕೆ., ರೊನಾಲ್ಡ್ ಮೊರಾಸ್ ಅವರು ಉಪಸ್ಥಿತರಿರುವರು.
ಮಧ್ಯಾಹ್ನ ಗಂಟೆ ೩ರಿಂದ ಹಾವು-ನಾವು-ಪರಿಸರ ಕಾರ್ಯಕ್ರಮ ಜರಗಲಿದ್ದು ಉರಗತಜ್ಞ ಗುರುರಾಜ ಸನಿಲ್ ಪ್ರಸ್ತುತ ಪಡಿಸುವರು. ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಕನ್ನಡ ಭವನ ನಿರ್ಮಾಣ ಸಮಿತಿ ಸಂಚಾಲಕ ಗಂಗಾಧರ ಭಟ್ ಕೊಳಕೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಬಿ.ತಮ್ಮಯ್ಯ ಭಾಗವಹಿಸುವರು.
ಬಳಿಕ ಸಮ್ಮಾನ ಮತ್ತು ಸಮಾರೋಪ ಸಮಾರಂಭ ನಡೆಯಲಿದ್ದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಅಧ್ಯಕ್ಷತೆ ವಹಿಸಲಿರುವರು. ಮೂಡಬಿದಿರೆ ಆಳ್ವಾಸ್ ವಿದ್ಯಾ ಸಂಸ್ಥೆ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರು ಸಮ್ಮಾನಿತರನ್ನು ಸಮ್ಮಾನಿಸುವರು. ಸ್ವಾಗತ ಸಮಿತಿ ಗೌರವಾಧ್ಯಕ್ಷ ಅರ್ಕಕೀರ್ತಿ ಇಂದ್ರ ಅವರು ಶುಭಶಂಸನೆ ನೀಡುವರು. ಮಂಗಳೂರು ವಿಶ್ವವಿದ್ಯಾನಿಲಯ ಎಸ್.ವಿ.ಪಿ.ಅಧ್ಯಯನ ಸಂಸ್ಥೆಯ ಡಾ. ಧನಂಜಯ ಕುಂಬ್ಳೆ ಅವರು ಸಮಾರೋಪ ಭಾಷಣ ಮಾಡಲಿರುವರು.
ಪುಂಡಿಕಾ ಗಣಪಯ್ಯ ಭಟ್ ಅವರು ಸಮ್ಮೇಳನಾಧ್ಯಕ್ಷರಾಗಿ ಮಾತನಾಡುವರು. ಅಳಿಕೆ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು.ಗಂಗಾಧರ ಭಟ್, ಬಂಟ್ವಾಳ ತಹಶೀಲ್ದಾರ್ ಪುರಂಧರ ಹೆಗ್ಡೆ, ಶ್ರೀ ಕ್ಷೇತ್ರ ನಂದಾವರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ಅವರು ಉಪಸ್ಥಿತರಿರುವರು.
ಇದೇ ವೇಳೆ ವಾಸು ಶೆಟ್ಟಿ ಕುತ್ಲೋಡಿ, ಅಮೈ ಕೃಷ್ಣ ಭಟ್, ಜಯ ನಾಯ್ಕ, ಜಿ.ಮಹಮ್ಮದ್ ಹನೀಫ್ ಗೋಳ್ತಮಜಲು, ವಿಟ್ಲ ಮಂಗೇಶ್ ಭಟ್, ಪದ್ಮನಾಭ ಶೆಟ್ಟಿಗಾರ್, ವಿಶ್ವನಾಥ ನಾಕ್ ನಿರುಬಲು ಮಂಚಿ, ಶಾರಾದಾ ಬಂಗೇರ ,ಚೆನ್ನಪ್ಪ ಅಳಿಕೆ, ಪ್ರಕಾಶ್ ಅಂಚನ್, ಅನಿತಾ ಮುರಳೀಕೃಷ್ಣ, ಎಚ್ಕೆ ನಯನಾಡು ಅವರನ್ನು ಸಮ್ಮಾನಿಸಲಾಗುವುದು.
ಬಳಿಕ ಸಿದ್ಧಕಟ್ಟೆ ಪ.ಪೂ.ಕಾಲೇಜು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ, ಆಳ್ವಾಸ್ ಂಕಿಟ ಯಕ್ಷಗಾನ ಅಧ್ಯಕ್ಷನ ಕೇಂದ್ರ ಅವರಿಂದ ಮೋಕ್ಷ ಮೋಹರ ಯಕ್ಷ ಪ್ರಯೋಗ ನಡೆಯಲಿದೆ ಎಂದು ಹೇಳಿದರು.
ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್‍ಯಕಾರಿ ಸಮಿತಿ ಗೌರವ ಕಾರ್‍ಯದರ್‍ಶಿ ಬಿ.ತಮ್ಮಯ್ಯ, ಸ್ವಾಗತ ಸಮಿತಿ ಪ್ರಧಾನ ಕಾರ್‍ಯದರ್‍ಶಿ ರಮಾನಂದ, ಕೋಶಾಕಾರಿ ಡಾ. ಸುದೀಪ್ ಕುಮಾರ್, ಸೀತಾರಾಮ ಶೆಟ್ಟಿ, ಅಚ್ಯುತ ಆಚಾರ್‍ಯ, ಕಸಾಪ ನಿಕಟಪೂರ್‍ವ ಅಧ್ಯಕ್ಷ ಜಯಾನಂದ ಪೆರಾಜೆ, ಹೋಬಳಿ ಸಂಚಾಲಕ ಗೋಪಾಲ ಅಂಚನ್ ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಏರ್ಯ ಉದ್ಘಾಟನೆ, ಡಾ. ಪುಂಡಿಕಾಯಿ ಅಧ್ಯಕ್ಷತೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*