ಒಂದು ತಿಂಗಳೊಳಗೆ ಕುಡ್ಲ ಎಕ್ಸ್ ಪ್ರೆಸ್ ಮಂಗಳೂರಿಂದ ಆರಂಭ

ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಮಂಗಳವಾರ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಂಗಳೂರ – ಹಾಸನ – ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರು ಸಂಪರ್ಕಿಸುವ ಕುಡ್ಲ ಎಕ್ಸ್ ಪ್ರೆಸ್ ರೈಲನ್ನು ಶೀಘ್ರ ಮಂಗಳೂರು ಕೇಂದ್ರ ರೈಲು ನಿಲ್ದಾಣದಿಂದ ಆರಂಭಿಸುವಂತೆ ಮನವಿ ಮಾಡಿದ್ದಾರೆ.

ಮನವಿಗೆ ಸ್ಪಂದಿಸಿದ  ರೈಲ್ವೇ ಸಚಿವ ಸುರೇಶ್ ಪ್ರಭು, ಕುಡ್ಲ ಎಕ್ಸಪ್ರೆಸ್ ರೈಲು ಒಂದು ತಿಂಗಳೊಳಗಾಗಿ ಪ್ರಾರಂಭಿಸುವ ಭರವಸೆ ನೀಡಿರುತ್ತಾರೆ. ಇದಲ್ಲದೆ ಮಂಗಳೂರು ಕೇಂದ್ರ ರೈಲು ನಿಲ್ದಾಣದ ಹೆಚ್ಚುವರಿ ಪ್ಲಾಟ್ ಫಾರಂ ಮತ್ತು ನೇತ್ರಾವತಿ ಕ್ಯಾಬಿನ್ ನಿಂದ ಮಂಗಳೂರು ಕೇಂದ್ರ ರೈಲು ನಿಲ್ದಾಣದ ಡಬ್ಲಿಂಗ್ ಕಾಮಗಾರಿಯನ್ನು ಶೀಘ್ರ ಪೂರೈಸುವಂತೆಯೂ ನಳಿನ್ ಮನವಿ ಸಲ್ಲಿಸಿದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ