ಮಗುವಿನೊಂದಿಗೆ ಮಹಿಳೆಯೋರ್ವರು ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ವೇಳೆ ಟ್ರಾಫಿಕ್ ಪೊಲೀಸರು ರಕ್ಷಿಸಿದ್ದಾರೆ. ಸೋಮವಾರ ಸಂಜೆ ವೇಳೆಗೆ ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಪುತ್ರನೊಂದಿಗೆ ಪಾಣೆಮಂಗಳೂರು ಸೇತುವೆಯಲ್ಲಿ ನದಿಗೆ ಹಾರಲು ಯತ್ನಿಸುತ್ತಿದ್ದುದನ್ನು ಕಂಡ ಬಂಟ್ವಾಳ ಟ್ರಾಫಿಕ್ ಪೊಲೀಸರಾದ ಕುಶಾಲಪ್ಪ, ಕೇಶವ ಮತ್ತು ಗಣೇಶ ಜೊತೆ ಸೇರಿ ಮಹಿಳೆಯನ್ನು ರಕ್ಷಿಸಿದ್ದಾರೆ.