ಪಕ್ಷ ಸಂಘಟನೆ ಬಲಪಡಿಸಲು ಕರೆ

ಪಕ್ಷದ ಸಂಘಟನೆ ಬಲಪಡಿಸಲು ಎಲ್ಲರೂ ಸಕ್ರಿಯವಾಗಿ ಶ್ರಮಿಸಬೇಕು ಎಂದು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಕರೆ ನೀಡಿದರು. ಬಂಟ್ವಾಳ ನಿತ್ಯಾನಂದ ಭಜನಾ ಮಂದಿರದಲ್ಲಿ ನಡೆದ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇವದಾಸ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.  ಸಮಾರೋಪ ದಲ್ಲಿ ಪಕ್ಷ ನಾಯಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಮಾತನಾಡಿದರು. ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ದೇವದಾಸ್ ಶೆಟ್ಟಿ, ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಜಿಲ್ಲಾ ವಕ್ತಾರರಾದ ಜಿತೇಂದ್ರ ಕೊಟ್ಟಾರಿ, ವಿಕಾಸ್ ಪುತ್ತೂರು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಮಂಡಲ ಉಪಾಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಎಸ್.ಸಿ.ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು, ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಕಮಲಾಕ್ಷಿ ಕೆ ಪೂಜಾರಿ, ಚೆನ್ನಪ್ಪ ಪೂಜಾರಿ, ವೆಂಕಟೇಶ್ ನಾವಡ ಉಪಸ್ಥಿತರಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ