ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಗುರು ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಉದ್ಯಮಿಗಳಾಗಿರುವ ಜಯಾನಂದಆಚಾರ್ಯ ಹೊಂಬಾಳೆ ಅರಳಿಸುವ ಮೂಲಕ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸು ಚಾಲಕರಾಗಿರುವ ದಯಾನಂದ ಗಿಡಕ್ಕೆ ನೀರುಎ ರೆಯುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು.
ವಿದ್ಯಾರ್ಥಿಗಳಾದ ಖುಷಿ ಹಾಗೂ ವಿಂದ್ಯಾಶ್ರೀ ಬಣ್ಣವನ್ನು ಎರೆಚುವ ಮೂಲಕ ಭಿತ್ತಿಪತ್ರ ಅನಾವರಣಗೊಳಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನ್ಯಾಯವಾದಿ ಶಿವಗಿರಿ ಸತೀಶ್ ಭಟ್ ಶಿಬಿರದಲ್ಲಿ ನಡೆಯುವ ವಿವಿಧ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಉತ್ತಮರೀತಿಯಲ್ಲಿ ಭಾಗವಹಿಸಿ ಶಿಬಿರದ ನಾಮಾದೇಯದಂತೆ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳು ಚಿಗುರಲಿ ಎಂದು ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರವಿರಾಜ್ ಕಣಂತೂರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸೌಭಾಗ್ಯ ನಿರೂಪಿಸಿ, ವಾತ್ಸಲ್ಯ ಸ್ವಾಗತಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…