ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕೋರ್ಟ್ ಹಾಲ್ ನಲ್ಲಿ ದ.ಕ. ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಆಡಳಿತಾತ್ಮಕ ಮಂಜೂರಾತಿ ದೊರೆತು ಪ್ರಗತಿಯಲ್ಲಿ ಹಾಗೂ ಬಾಕಿ ಉಳಿದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ನಡೆಯಿತು.
ಈ ಸಂದರ್ಭ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ದ.ಕ. ಜಿಲ್ಲಾಧಿಕಾರಿ ಡಾ. ಜಗದೀಶ್, ಅಪರ ಜಿಲ್ಲಾಧಿಕಾರಿ ಕುಮಾರ್, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಕಾಮಗಾರಿ, ಅಂಬೇಡ್ಕರ್ ಭವನ, ಹೌಸಿಂಗ್ ಬೋರ್ಡ್ ಸಹಿತ ವಿವಿಧ ಕಾಮಗಾರಿಗಳ ಪ್ರಗತಿಯನ್ನು ಅವರು ಪರಿಶೀಲಿಸಿದರು. ಈ ಸಂದರ್ಭ ಲೋಕೋಪಯೋಗಿ ಇಲಾಖೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಕರ್ನಾಟಕ ಗೃಹಮಂಡಳಿ, ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಸಹಿತ ವಿವಿಧ ಇಲಾಖೆಯ ಉನ್ನತ ಅಧಿಕಾರಿಗಳು ಹಾಜರಿದ್ದರು.
Be the first to comment on "ಬಾಕಿ ಉಳಿದ ಕಾಮಗಾರಿ ತ್ವರಿತಗೊಳಿಸಲು ಸಚಿವ ರೈ ಸೂಚನೆ"