ಜಿಲ್ಲಾ ಸುದ್ದಿ

ಬಾಕಿ ಉಳಿದ ಕಾಮಗಾರಿ ತ್ವರಿತಗೊಳಿಸಲು ಸಚಿವ ರೈ ಸೂಚನೆ

ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕೋರ್ಟ್ ಹಾಲ್ ನಲ್ಲಿ ದ.ಕ. ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಆಡಳಿತಾತ್ಮಕ ಮಂಜೂರಾತಿ ದೊರೆತು ಪ್ರಗತಿಯಲ್ಲಿ ಹಾಗೂ ಬಾಕಿ ಉಳಿದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ನಡೆಯಿತು.

ಜಾಹೀರಾತು

ಈ ಸಂದರ್ಭ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ದ.ಕ. ಜಿಲ್ಲಾಧಿಕಾರಿ ಡಾ. ಜಗದೀಶ್, ಅಪರ ಜಿಲ್ಲಾಧಿಕಾರಿ ಕುಮಾರ್, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಕಾಮಗಾರಿ, ಅಂಬೇಡ್ಕರ್ ಭವನ, ಹೌಸಿಂಗ್ ಬೋರ್ಡ್ ಸಹಿತ ವಿವಿಧ ಕಾಮಗಾರಿಗಳ ಪ್ರಗತಿಯನ್ನು ಅವರು ಪರಿಶೀಲಿಸಿದರು. ಈ ಸಂದರ್ಭ ಲೋಕೋಪಯೋಗಿ ಇಲಾಖೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಕರ್ನಾಟಕ ಗೃಹಮಂಡಳಿ, ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಸಹಿತ ವಿವಿಧ ಇಲಾಖೆಯ ಉನ್ನತ ಅಧಿಕಾರಿಗಳು ಹಾಜರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ