ರಾಜ್ಯ ಬಜೆಟ್‍ನಲ್ಲಿ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು: ಸಚಿವ ರಮಾನಾಥ ರೈ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇತ್ತೀಚೆಗೆ ಮಂಡಿಸಿದ ರಾಜ್ಯ ಬಜೆಟ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು ದೊರಕಿದೆ ಎಂದು ಅರಣ್ಯ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ತಿಳಿಸಿದ್ದಾರೆ.
  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಏರ್ಪಡಿಸಿರುವ ರಾಜ್ಯ ಬಜೆಟ್ ಕುರಿತು ಪ್ರಚಾರ ಅಭಿಯಾನ ‘ಜನಪರ-ಜನಪ್ರಿಯ” ಆಯವ್ಯಯ ಕಾರ್ಯಕ್ರಮಕ್ಕೆ ಅವರು ಗುರುವಾರ ನಗರದ ಸಕ್ರ್ಯುಟ್ ಹೌಸ್ ಆವರಣದಲ್ಲಿ ಹಸಿರು ನಿಶಾನೆ ತೋರಿಸಿ ಮಾತನಾಡಿದರು.
  ಜಿಲ್ಲೆಯ ದೀರ್ಘಕಾಲದ ಬೇಡಿಕೆಯಾದ ಪಶ್ಚಿಮವಾಹಿನಿಗೆ 100 ಕೋಟಿ ರೂ. ಬಜೆಟ್‍ನಲ್ಲಿ ಒದಗಿಸುವ ಮೂಲಕ ಇಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ದಿಟ್ಟ ಹೆಜ್ಜೆ ಇಡಲಾಗಿದೆ. ಅದೇ ರೀತಿ ಹೊಸ ತಾಲೂಕುಗಳ ರಚನೆ, ವಿಮಾನ ನಿಲ್ದಾಣದ ವಿಸ್ತರಣೆ, ಮೀನುಗಾರಿಕಾ ಜೆಟ್ಟಿ ವಿಸ್ತರಣೆ ಸೇರಿದಂತೆ ಜಿಲ್ಲೆಯಲ್ಲಿ  ಹಲವಾರು ವರ್ಷಗಳಿಂದ ಕೇಳಿಬರುತ್ತಿದ್ದ ಬೇಡಿಕೆಗಳಿಗೆ ಬಜೆಟ್‍ನಲ್ಲಿ ಸ್ಪಂದಿಸಲಾಗಿದೆ ಎಂದು ಸಚಿವರು ಹೇಳಿದರು.
 ರಾಜ್ಯದ ಜನತೆ ಇಂದು ರಾಜ್ಯ ಸರಕಾರದ ಒಂದಲ್ಲೊಂದು ಯೋಜನೆಯಲ್ಲಿ ನೇರ ಪ್ರಯೋಜನ ಪಡೆಯುತ್ತಿದ್ದಾರೆ. ನಾಗರೀಕರಿಗೆ ಬಜೆಟ್ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಈ ಪ್ರಚಾರ ಅಭಿಯಾನ ನಡೆಸಲಾಗುತ್ತಿದೆ ಎಂದು ಸಚಿವ ರಮಾನಾಥ ರೈ ತಿಳಿಸಿದರು.
    ಮಂಗಳೂರು ಉತ್ತರ ಶಾಸಕ ಬಿ.ಎ. ಮೊಹಿದೀನ್ ಬಾವಾ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಮೂಲಸೌಕರ್ಯ ಯೋಜನೆಗಳಿಗೆ ಬಜೆಟ್‍ನಲ್ಲಿ ಅನುದಾನ ದೊರೆತಿದೆ. ಮಂಗಳೂರು ವಿಮಾನ ನಿಲ್ದಾಣದ ರಸ್ತೆ ಅಭಿವೃದ್ಧಿ, ರನ್‍ವೇ ವಿಸ್ತರಣೆ ಕೈಗೆತ್ತಿಕೊಳ್ಳಲಾಗಿದೆ. ಅದೇ ರೀತಿ ಮೊಗವೀರರು ಸೇರಿದಂತೆ  ಬೆಸ್ತ ಸಮುದಾಯಕ್ಕೆ ಪ್ರತ್ಯೇಕ ನಿಗಮ ‘ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ’ ಸ್ಥಾಪಿಸಲಾಗಿದೆ. ಹಜ್ ಭವನ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ವಾರ್ತಾ ಇಲಾಖೆಯು ಜಾಗೃತಿ ಅಭಿಯಾನ ನಡೆಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
 ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಪ್ರಾಸ್ತಾವಿಕವಾಗಿ ಮಾತನಾಡಿ, ‘ಜನಪರ-ಜನಪ್ರಿಯ” ಬಜೆಟ್ ಅಭಿಯಾನವು ಜಿಲ್ಲೆಯಾದ್ಯಂತ 20 ದಿನಗಳ ಕಾಲ ಸಂಚರಿಸಲಿದೆ ಎಂದು ಹೇಳಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ರಾಜ್ಯ ಬಜೆಟ್‍ನಲ್ಲಿ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು: ಸಚಿವ ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*