ನಾಲ್ಕು ಮಾರ್ಗಗಳನ್ನು ಸಂಧಿಸುವ ಬಂಟ್ವಾಳದ ಬೈಪಾಸ್ ಜಂಕ್ಷನ್ ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಭೂ ಸ್ವಾಧೀನಕ್ಕೆ ಪ್ರಸ್ತಾವ ಕಳುಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶನಿವಾರ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಸಚಿವರು ತುಂಬ್ಯ ಜಂಕ್ಷನ್‌ನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪರಿಸರದ ಭೂ ಸ್ವಾನಗೊಳಿಸಿ ಪ್ರಸ್ತಾಪವನ್ನು ಸರಕಾರಕ್ಕೆ ಸಲ್ಲಿಸುವಂತೆ ಸಲಹೆ ನೀಡಿದರು.
ನಾಲ್ಕು ಮಾರ್ಗಗಳನ್ನು ಸಂಧಿಸುವ ಜಂಕ್ಷನ್‌ನಲ್ಲಿ ವಾಹನಗಳ ದಟ್ಟಣೆಯಿಂದ ಪ್ರತಿನಿತ್ಯವೂ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಸ್ತೆಯನ್ನು ಅಗಲೀಕರಗೊಳಿಸಲು ಶೀಘ್ರ ಪ್ರಕ್ರಿಯೆ ಆರಂಭಿಸುವಂತೆ ಅವರು ಸೂಚಿಸಿದರು.
ಬಿ.ಸಿ.ರೋಡಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಖಾಸಗಿ ಪಿಪಿಪಿ ಮಾದರಿಯ ಬಸ್ ನಿಲ್ದಾಣಕ್ಕೆ ಸಂಬಂಸಿದಂತೆ ಉಂಟಾಗಬಹುದಾದ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಹಾಗೂ ಇಲಾಖೆಯ ಮಧ್ಯೆ ಸಮನ್ವಯತೆ ಸಾಧಿಸಲು ಬಂಟ್ವಾಳ ತಾಪಂ ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾ ಮಿರಾಂದ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ಸಭೆಯಲ್ಲಿ ನಿಯುಕ್ತಿಗೊಳಿಸಲಾಯಿತು.
ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಸಹಾಯಕ ಕಮಿಷನರ್ ರೇಣುಕಾ ಪ್ರಸಾದ್, ತಹಶೀಲ್ದಾರ್ ಪುರಂದರ ಹೆಗ್ಡೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪ್ರಸನ್ನ, ರಾಷ್ಟ್ರೀಯ ಹೆದ್ದಾರಿಯ ಕಾರ್ಯಪಾಲ ಎಂಜಿನಿಯರ್ ರಮೇಶ್, ಸಹಾಯಕ ಕಾರ್ಯ ಪಾಲಕ ಅಬ್ದುಲ್ ರಹ್ಮಾನ್, ಬಂಟ್ವಾಳ ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್, ಎಂಜಿನಿಯರ್ ಅರುಣ್ ಪ್ರಕಾಶ್, ಕೆಯುಡಬ್ಲ್ಯುಎಸ್‌ನ ಶೋಭಾ ಲಕ್ಷ್ಮಿ, ಮುಖ್ಯಾಕಾರಿ ಸುಧಾಕರ್ ಮೊದಲಾದವರು ಉಪಸ್ಥಿತರಿದ್ದರು.