ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರು ಬಿಡುಗಡೆ ಮಾಡಿದರು.
ವಿಟ್ಲ ಬೆನಕ ಕ್ಲಿನಿಕ್‌ನ ಡಾ. ಅರವಿಂದ ಮತ್ತು ಮಂಗಳೂರು ರೈ ಎಸ್ಟೇಟಿನ ಅಶೋಕ ರೈ ಕೊಡಿಂಬಾಡಿ ಕಲಶ ರಶೀದಿ ಪುಸ್ತಕ ಬಿಡುಗಡೆ ಮಾಡಿದರು.
ಶ್ರೀಧಾಮ ಮಾಣಿಲದ ಸ್ವಾಮೀಜಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೇಗೆ ಱದಿ ಪುಸ್ತಕ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು.
ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೋಂಕೊಡಿ ಪದ್ಮನಾಭ, ಅಧ್ಯಕ್ಷ ಸದಾಶಿವ ಆಚಾರ್ಯ, ಕಾರ್ಯಾಧ್ಯಕ್ಷ ಸೀತಾರಾಮ ಶೆಟ್ಟಿ ಒಕ್ಕೆತ್ತೂರು, ಕಾರ್ಯದರ್ಶಿ ವಿಶ್ವನಾಥ ನಾಯ್ತೊಟ್ಟು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಪ್ರಕಾಶ್, ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ವಿಶ್ವಸ್ಥ ಮಂಡಳಿ ಅಧ್ಯಕ್ಷ ಸಂಕಪ್ಪ ಗೌಡ, ಕೋಲ್ಪೆ ಷಣ್ಮುಖ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಸುರೇಶ್ ಉಪಸ್ಥಿತರಿದ್ದರು. ಸಂಜೀವ ಪೂಜಾರಿ ನಿಡ್ಯ ಸ್ವಾಗತಿಸಿದರು. ದಿನೇಶ್ ಮಾಮೇಶ್ವರ ಪ್ರಸ್ತಾವಿಸಿದರು. ಬ್ರಹ್ಮ ಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ವೀರಪ್ಪ ಗೌಡ ರಾಯರಬೆಟ್ಟು ವಂದಿಸಿದರು. ವೆಂಕಟೇಶ ಅನಂತಾಡಿ ಕಾರ್ಯಕ್ರಮ ನಿರೂಪಿಸಿಸಿದರು. ಪುರಂದರ ಸಹಕರಿಸಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)