ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಕರೆಂಕಿ ಇದರ ದಶಮಾನೋತ್ಸವದ ಅಂಗವಾಗಿ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ಸಮಾರಂಭ ಎಪ್ರಿಲ್ ತಿಂಗಳ ಅಂತ್ಯದಲ್ಲಿ ನಡೆಯಲಿದ್ದು ಅದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಶಾಲೆಯಲ್ಲಿ ನಡೆಯಿತು.
ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಹಾಗೂ ಶಾಲೆ ಕಟ್ಟಡ ನಿರ್ಮಾಣದ ರೂವಾರಿ ಪ್ರಕಾಶ್ ಅಂಚನ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು ದೇಶದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಸರಕಾರಿ ಶಾಲೆಯನ್ನು ದತ್ತು ಸ್ವೀಕರಿಸಿ ಬಡ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಸುಸಜ್ಜಿತ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಮುಂದಿನ ವರ್ಷಕ್ಕೆ ಈಗಾಗಲೇ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆಯೂ ಐದು ನೂರರ ಗಡಿದಾಟಿದ್ದು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸ ಕಟ್ಟಡ ನಿರ್ಮಾಣ ಅನಿವಾರ್ಯವಾಗಿದೆ ಎಂದರು. ಕಟ್ಟಡ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದ್ದು ದುರ್ಗಾ ಫ್ರೆಂಡ್ಸ್‌ಕ್ಲಬ್ ಸದಸ್ಯರು ರಾತ್ರಿ ಹಗಲೆನ್ನದೆ ಶ್ರಮದಾನದ ಸೇವೆಯ ಮೂಲಕ ಶಾಲೆ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪೂವಪ್ಪ ಮೆಂಡನ್, ಪ್ರಗತಿ ಪರ ಕೃಷಿಕ ಕರುಣೇಂದ್ರ ಪೂಜಾರಿ, ಪ್ರಮುಖರಾದ ರಾಮಚಂದ್ರ ಪೂಜಾರಿ, ಪುರುಷೋತ್ತಮ ಅಂಚನ್, ಮಹೇಶ್ ಕುಲಾಲ್ ಡೆಚ್ಚಾರ್, ವಿನೋದ್ ಕುಮಾರ್, ಗಣೇಶ್ ಜಿ., ಕಿರ್ತನ್, ಸಚಿನ್, ತಿರುಮಲೇಶ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ, ಸಹ ಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್ ಹಾಜರಿದ್ದರು.
Be the first to comment on "ದಡ್ಡಲಕಾಡು ಶಾಲೆಯ ಲೋಕಾರ್ಪಣೆ ಆಮಂತ್ರಣ ಪತ್ರಿಕೆ ಬಿಡುಗಡೆ"