ಬಂಟ್ವಾಳ

ದಡ್ಡಲಕಾಡು ಶಾಲೆಯ ಲೋಕಾರ್ಪಣೆ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಕರೆಂಕಿ ಇದರ ದಶಮಾನೋತ್ಸವದ ಅಂಗವಾಗಿ ದಡ್ಡಲಕಾಡು ಸರಕಾರಿ  ಹಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ಸಮಾರಂಭ ಎಪ್ರಿಲ್ ತಿಂಗಳ ಅಂತ್ಯದಲ್ಲಿ  ನಡೆಯಲಿದ್ದು ಅದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಶಾಲೆಯಲ್ಲಿ ನಡೆಯಿತು.

ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಹಾಗೂ ಶಾಲೆ ಕಟ್ಟಡ ನಿರ್ಮಾಣದ ರೂವಾರಿ ಪ್ರಕಾಶ್ ಅಂಚನ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು ದೇಶದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಸರಕಾರಿ ಶಾಲೆಯನ್ನು ದತ್ತು ಸ್ವೀಕರಿಸಿ ಬಡ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಸುಸಜ್ಜಿತ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಮುಂದಿನ ವರ್ಷಕ್ಕೆ ಈಗಾಗಲೇ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆಯೂ ಐದು ನೂರರ ಗಡಿದಾಟಿದ್ದು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸ ಕಟ್ಟಡ ನಿರ್ಮಾಣ ಅನಿವಾರ್ಯವಾಗಿದೆ ಎಂದರು. ಕಟ್ಟಡ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದ್ದು ದುರ್ಗಾ ಫ್ರೆಂಡ್ಸ್‌ಕ್ಲಬ್ ಸದಸ್ಯರು ರಾತ್ರಿ ಹಗಲೆನ್ನದೆ ಶ್ರಮದಾನದ ಸೇವೆಯ ಮೂಲಕ ಶಾಲೆ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪೂವಪ್ಪ ಮೆಂಡನ್, ಪ್ರಗತಿ ಪರ ಕೃಷಿಕ ಕರುಣೇಂದ್ರ ಪೂಜಾರಿ, ಪ್ರಮುಖರಾದ ರಾಮಚಂದ್ರ ಪೂಜಾರಿ, ಪುರುಷೋತ್ತಮ ಅಂಚನ್,  ಮಹೇಶ್ ಕುಲಾಲ್ ಡೆಚ್ಚಾರ್, ವಿನೋದ್ ಕುಮಾರ್, ಗಣೇಶ್ ಜಿ., ಕಿರ್ತನ್,  ಸಚಿನ್, ತಿರುಮಲೇಶ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ, ಸಹ ಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್ ಹಾಜರಿದ್ದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts