ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಕೋಡಿಮಜಲು ನಿವಾಸಿ ಶಂಕರನಾರಾಯಣ ಭಟ್‌ವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಯಿಂದ ಬಿಡುಗಡೆಯಾದ 1.5 ಲಕ್ಷ ರೂ. ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ವಿತರಿಸಿದರು.
ಈ ಸಂದರ್ಭದಲ್ಲಿ ಎ.ಪಿ.ಎಂ.ಸಿ ಅಧ್ಯಕ್ಷ ಪದ್ಮನಾಭ ರೈ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭೆ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾಲೂಕು ಕೆ.ಡಿ.ಪಿ ಸದಸ್ಯ ಉಮೇಶ್ ಬೋಳಂತೂರು, ಎ.ಪಿ.ಎಂ.ಸಿ ನಾಮನಿರ್ದೇಶಿತ ಸದಸ್ಯ ಅಲೋನ್ಸ್ ಮಿನೇಜಸ್ ಮೊದಲಾದವರು ಉಪಸ್ಥಿತರಿದ್ದರು.
ಸಿಸಿ ಕ್ಯಾಮರಾ ಅಳವಡಿಸಿ, ಅಪರಿಚಿತರಿಗೆ ಬಾಗಿಲು ತೆಗೆಯಬೇಡಿ – ಪೊಲೀಸರ ಸಲಹೆ (more…)