ಮಂಗಳೂರಿನಲ್ಲಿ ಪೊಲೀಸರು ಪ್ರತಿಭಟನಾನಿರತ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬಿ.ಸಿ.ರೋಡಿನಲ್ಲಿ ಬುಧವಾರ ಸಂಜೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಿಸಿಬಿ ಪೊಲೀಸರ ಹಾಗೂ ಸಂಘ ಪರಿವಾರದ ವಿರುದ್ಧ ತೀವ್ರ ಟೀಕಾಪ್ರಹಾರ ಮಾಡಿದ ಪ್ರತಿಭಟನಾಕಾರರು, ಅಮಾಯಕ ಯುವಕ ಖುರೇಶ್ ಎಂಬಾತನನ್ನು ಅಕ್ರಮಾಇ ಬಂಧಿಸಿ ಮಾರಣಾಂತಿಕ ದೌರ್ಜನ್ಯ ಎಸಗಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರು ವಿನಾ ಕಾರಣ ಲಾಠಿ ಚಾಜ್ ನಡೆಸಿ ಹಲ್ಲೆ ನಡೆಸಿದ್ದಾರೆ. ಇದು ನಾಗರಿಕರ ಹಕ್ಕು ದಮನಿಸುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.
ಈ ಕುರಿತು ಮಂಗಳೂರು ಕಮೀಷನರ್ ಎಂ.ಚಂದ್ರಶೇಖರ್ ಹೇಳಿಕೆ ನೀಡಿರುವುದು ಸರಿಯಾಗಿಲ್ಲ. ಆದ್ದರಿಂದ ಆಡಳಿತ ವ್ಯವಸ್ಥೆ ಕೂಡಲೇ ಎಚ್ಚೆತ್ತುಕೊಂಡು ಗಂಭೀರ ದೌರ್ಜನ್ಯದಲ್ಲಿ ಭಾಗಿಯಾಗಿರುವ ಸಿಸಿಬಿ ಇನ್ಸ್ ಪೆಕ್ಟರ್ ಗಳಾದ ಸುನೀಲ್ ನಾಯ್ಕ್ ಮತ್ತು ಎಸ್.ಐ. ಶಾಂ ಸುಂದರ್ ಸೇರಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಅಹಮದ್ ಖುರೇಷಿಗೆ ಸೂಕ್ತ ಪರಿಹಾರವನ್ನು ಒದಗಿಸಬೇಕು ಎಂದು ಒತ್ತಾಯಿಸಿದರು. ಸುಮಾರು ೩೦೦ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಉದ್ದೇಶಿಸಿ ಎಸ್.ಡಿ.ಪಿ.ಐ. ರಾಜ್ಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ, ಜಿಲ್ಲಾ ಸಮಿತಿ ಸದಸ್ಯ ಇಮ್ತಿಯಾಜ್ ತುಂಬೆ ಮಾತನಾಡಿದರು. ಪಿಎಫ್ ಐ ಬಂಟ್ವಾಳ ಸಮಿತಿ ಸದಸ್ಯ ಝಕಾರಿಯಾ ಕಲ್ಲಡ್ಕ, ಪ್ರಧಾನ ಕಾರ್ಯದರ್ಶಿ ಸಲೀಂ ಕುಂಪನಮಜಲು ಸಹಿತ ಪ್ರಮುಖ ನಾಯಕರು ಈ ಸಂದರ್ಭ ಉಪಸ್ಥಿತರಿದ್ದರು.
ಬಿ.ಸಿ.ರೋಡಿನಲ್ಲಿ ಪಿಎಫ್ ಐ ಪ್ರತಿಭಟನೆ, ಪೊಲೀಸರ ಮೇಲೆ ಕ್ರಮಕ್ಕೆ ಒತ್ತಾಯ
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡಿನಲ್ಲಿ ಪಿಎಫ್ ಐ ಪ್ರತಿಭಟನೆ, ಪೊಲೀಸರ ಮೇಲೆ ಕ್ರಮಕ್ಕೆ ಒತ್ತಾಯ"