ಬಂಟ್ವಾಳ

ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ್

ಬಾಬು ಜಗಜೀವನರಾಮ್ ಅವರ 110ನೇ ಜನ್ಮದಿನಾಚರಣೆ ಪ್ರಯುಕ್ತ ಅವರ ಸ್ಮರಣೆ ಬಂಟ್ವಾಳ ತಾಲೂಕು ಪಂಚಾಯಿತಿ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಈ ಸಂದರ್ಭ ವಿಶೇಷ ಉಪನ್ಯಾಸ ನೀಡಿದ ರಾಜೀವ ಕೆ, ಬಾಬು ಜಗಜೀವನರಾಮ್ ಹಸಿರು ಕ್ರಾಂತಿಯ ಹರಿಕಾರ ಎಂದು ಖ್ಯಾತರಾಗಿದ್ದರು. ಧ್ವನಿ ಇಲ್ಲದವರಿಗೆ ಧ್ವನಿಯಾದವರು, ಶೋಷಣೆ ವಿರುದ್ಧ ದನಿಯೆತ್ತಿದವರು. ಕಾರ್ಮಿಕರಿಗೆ, ಮಹಿಳೆಯರಿಗೆ, ದೀನ ದಲಿತರಿಗೆ ನೆರವಾದವರು ಎಂದು ಹೇಳಿದರು. ಬಾಬೂಜಿ ಎಂದು ಖ್ಯಾತರಾದ ಜಗಜೀವನ ರಾಮ್ ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಇವರು ನೆಹರು ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು, ರಕ್ಷಣೆಯಂಥ ಮಹತ್ತರ ಖಾತೆಯ ಜವಾಬ್ದಾರಿ ಹೊತ್ತಿದ್ದರು ಎಂದು ಹೇಳಿದರು.

ಜಾಹೀರಾತು

ಬಂಟ್ವಾಳ ನಗರ ಯೋಜನಾ ಪ್ರಾಕಾರ ಅಧ್ಯಕ್ಷ ಸದಾಶಿವ ಬಂಗೇರ ಮಾತನಾಡಿ, ಇಂಥ ಕಾರ್ಯಕ್ರಮಗಳು ಕೇವಲ ಕಾಟಾಚಾರಕ್ಕಷ್ಟೇ ಸೀಮಿತವಾಗದೆ ಜನಸಮುದಾಯ ಭಾಗವಹಿಸುವಂತಾಗಬೇಕು. ಇಲ್ಲವಾದರೆ ಕಾರ್ಯಕ್ರಮಗಳನ್ನು ನಡೆಸುವುದರಲ್ಲಿ ಅರ್ಥವಿಲ್ಲ. ಮುಂದಿನ ಬಾರಿ ಸರಕಾರಿ ಕಾರ್ಯಕ್ರಮ ಆಯೋಜಿಸುವಾಗ  ಇದಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸೂಚಿಸಿದರು.

ಈ ಸಂದರ್ಭ ಜಗಜೀವನರಾಮ್ ಅವರಿಗೆ ಗೌರವಾರ್ಪಣೆ ನಡೆಯಿತು. ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ. ಬಂಗೇರ, ತಾಪಂ ಇಒ ಸಿಪ್ರಿಯನ್ ಮಿರಾಂದಾ, ಉಪತಹಸೀಲ್ದಾರ್ ಪರಮೇಶ್ವರ ನಾಯ್ಕ, ಪುರಸಭಾ ಮುಖ್ಯಾಕಾರಿ ಎಂ.ಎಚ್.ಸುಧಾಕರ್, ತಾಪಂ ಸದಸ್ಯ ಸಂಜೀವ ಪೂಜಾರಿ, ದಲಿತ ಮುಖಂಡರು ಹಾಗೂ ಅಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ವಿನಯಕುಮಾರಿ ಸ್ವಾಗತಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಆಡಳಿತ ಮತ್ತು ಪುರಸಭೆ ವತಿಯಿಂದ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ