ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಎನ್ ಎಸ್ ಎಸ್ ಘಟಕದ ಸ್ವಯಂ ಸೇವಕರಿಂದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ವಾಮದಪದವಿನಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಆರೋಗ್ಯ ಕೇಂದ್ರದ ಸುತ್ತ ಮುತ್ತ ಇದ್ದ ಪ್ಲಾಸ್ಟಿಕ್, ತರಗೆಲೆ, ಕಸಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಉಮೇಶ್ ಅಡ್ಯಂತಾಯ, ರೇಡಿಯೋಲಾಜಿಸ್ಟ್ ಶ್ರೀ. ರಶೀದ್, ಯೋಜನಾಧಿಕಾರಿಗಳಾದ ಜಯರಾಮ, ಪ್ರೊ. ಸುರೇಶ್ ವಿ,, ದೈಹಿಕ ಶಿಕ್ಷಣ ನಿರ್ಧೇಶಕರಾದ ರಾಧಕೃಷ್ಣ ಎಚ್. ಬಿ. ಮತ್ತು ಕಾಲೇಜಿನ ಅಭಿವೃದ್ದಿ ಸಮಿತಿ ಸದಸ್ಯರಾದ ನವೀನ್‌ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…