ಬಂಟ್ವಾಳ

ಪುರಾವೆ ಇಲ್ಲದೆ ಬಂಧನ ಸರಿಯಲ್ಲ: ಅಮೀರ್ ಅಹ್ಮದ್

ನ್ಯಾಯಾಲಯ ಇಂದಿಗೂ ತನ್ನದೇ ಆದ ಗೌರವವನ್ನು ಉಳಿಸಿಕೊಂಡಿದೆ. ಪೊಲೀಸರು ಬಂಧಿಸಿದ ತಕ್ಷಣ ಯಾವುದೇ ಆರೋಪದ ಪುರಾವೆ ಇಲ್ಲದೆ ಹಲ್ಲೆ ನಡೆಸುವುದು ಸರಿಯಲ್ಲ ಎಂದು ಕೆಪಿಸಿಸಿ  ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷ ಡಾ. ಕೆ.ಎಸ್. ಅಮೀರ್ ಅಹ್ಮದ್ ತುಂಬೆ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಈಗಾಗಲೇ ಇಡೀ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಪರಮೇಶ್ವರ ಅವರಿಗೆ ಕಾಂಗ್ರೆಸ್ ನಾಯಕರು ಖುದ್ದಾಗಿ ಮನವರಿಕೆ ಮಾಡಿಕೊಟ್ಟಿದ್ದು, ಸಮಗ್ರ ತನಿಖೆಗೊಳಪಡಿಸಿ ಕಠಿಣ ಕ್ರಮದ ಭರವಸೆ ದೊರೆತಿದೆ. ಈ ಮಧ್ಯೆ ಖುರೇಶಿ ಅವರ ಅನಾರೋಗ್ಯದ ಸಕಲ ಖರ್ಚು-ವೆಚ್ಚಗಳನ್ನು ರಾಜ್ಯ ಸರಕಾರ ಪೊಲೀಸ್ ಇಲಾಖೆಯಿಂದಲೇ ಭರಿಸಬೇಕು ಹಾಗೂ ಕುರೇಶಿ ಕುಟುಂಬಕ್ಕೆ ಪರಿಹಾರವನ್ನೂ ನೀಡಬೇಕು ಎಂದು ಸಿಎಂಗೆ ಒತ್ತಾಯಿಸಲಾಗಿದೆ ಎಂದು ಡಾ. ಅಮೀರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜಾಹೀರಾತು

ಇದೇ ವೇಳೆ ಪೊಲೀಸ್ ಇಲಾಖಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ಇಲಾಖಾ ಕಾರ್ಯವೈಖರಿಯಲ್ಲಿ ಹಸ್ತಕ್ಷೇಪ ನಡೆಸುತ್ತಿರುವ ಕಿಡಿಗೇಡಿ ಕೃತ್ಯಗಳನ್ನೂ ಅಷ್ಟೇ ಕಠಿಣ ಶಬ್ದಗಳಲ್ಲಿ ಖಂಡಿಸುವುದಾಗಿ ಡಾ. ಅಮೀರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ