ಉಪಚುನಾವಣೆ ವಿಜಯ ಮುಂದಿನ ಫಲಿತಾಂಶಕ್ಕೆ ದಿಕ್ಸೂಚಿ: ರೈ

ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಅಂತರದಿಂದ ಗೆಲುವು ಸಾಧಿಸಿದ್ದು, ಇದು ಮುಂದಿನ ಚುನಾವಣೆಯ ಫಲಿತಾಂಶಕ್ಕೆ ದಿಕ್ಸೂಚಿಯಾಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಜಾಹೀರಾತು

ಬಿ.ಸಿ.ರೋಡಿನ ಫ್ಲೈಓವರ್ ಬಳಿ ಕಾಂಗ್ರೆಸ್ ನ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಆಯೋಜಿಸಿದ್ದ ವಿಜಯೋತ್ಸವದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಾತ್ರ ಬಡವರ ನಾಡಿಮಿಡಿತ ಅರಿತಿರುವ ಪಕ್ಷವಾಗಿದ್ದು, ಕಾಂಗ್ರೆಸ್ ಮುಕ್ತ ಮಾಡುವ ಬಿಜೆಪಿ ಆಸೆ ನುಚ್ಚುನೂರಾಗಲಿದೆ, ಬಿಜೆಪಿ ಮುಕ್ತ ಕರ್ನಾಟಕದತ್ತ ಕಾಂಗ್ರೆಸ್ ಹೆಜ್ಜೆ ಇರಿಸಿದೆ ಎಂದರು.

ಬಲಾಢ್ಯರ ವಿರುದ್ಧವಾಗಿ ಕಾಂಗ್ರೆಸ್ ಪಕ್ಷ ಯಾವತ್ತೂ ಕೆಲಸ ಮಾಡಿಕೊಂಡು ಬಂದಿದೆ. ಜನರು ಅದನ್ನು ಮೆಚ್ಚಿದ್ದಾರೆ. ಯಾವ ಭರವಸೆಯನ್ನು ಕೊಟ್ಟಿದ್ದೇವೋ ಆ ಭರವಸೆಯನ್ನು ಈಡೇರಿಸುತ್ತದೆ ಎಂಬುದನ್ನು ಜನರು ಅರಿತಿದ್ದಾರೆ. ಬಿಜೆಪಿ ಮುಂದಿನ ದಿನಗಳಲ್ಲಿ ನೆಲಕಚ್ಚಲಿದೆ. ದಕ್ಷಿಣ ಭಾರತದಲ್ಲಿ ಜನರು ಕಾಂಗ್ರೆಸ್ ಗೆ ಬೆಂಬಲ ನೀಡುವ ಜನರು ಬಿಜೆಪಿ ಮುಕ್ತ ದಕ್ಷಿಣ ಭಾರತವನ್ನಾಗಿಸಲು ಕರ್ನಾಟಕದ ಜನರು ಮುನ್ನುಡಿ ಹಾಕಿದ್ದಾರೆ ಎಂದರು.

ಈ ಸಂದರ್ಭ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್. ಖಾದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ಸದಸ್ಯ ಆಲ್ಫೋನ್ಸ್ ಮಿನೇಜಸ್, ಪಕ್ಷ ನಾಯಕ ಮಾಧವ ಮಾವೆ, ಪಿಯುಸ್ ರೋಡ್ರಿಗಸ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಜಿಲ್ಲಾ ಉಪಾಧ್ಯಕ್ಷ ಲುಕ್ಮಾನ್,  ಪಾಣೆಮಂಗಳೂರು ಬ್ಲಾಕ್ ಕಾರ್ಯದರ್ಶಿ ಮಹಮ್ಮದ್ ನಂದಾವರ, ರಫೀಕ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಉಪಚುನಾವಣೆ ವಿಜಯ ಮುಂದಿನ ಫಲಿತಾಂಶಕ್ಕೆ ದಿಕ್ಸೂಚಿ: ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*