ಬಂಟ್ವಾಳ

ಮಣಿ: ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಸಮಾರಂಭಕ್ಕೆ ಚಾಲನೆ

ಕಸ್ಬಾ ಗ್ರಾಮದ ಮಣಿ ಎಂಬಲ್ಲಿ ಹಲವು ವರ್ಷದ ಹಿಂದೆ ಕಾರ್ಯಾಚರಿಸುತ್ತಿದ್ದ ಶ್ರೀ ದುರ್ಗಾಮಾತ ಬಜನಾ ಮಂದಿರ ಈಗ ದೇವಸ್ಥಾನವಾಗಿ ರೂಪುಗೊಂಡಿದೆ. ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಶಿಲಾಮಯ ಗರ್ಭಗ್ರಹ, ಮುಖಮಂಟಪ ಹಾಗೂ ಸುತ್ತುಪೌಲಿ ಮತ್ತು ಮುಂಭಾಗದಲ್ಲಿ ಮುಖದ್ವಾರವನ್ನು ನಿರ್ಮಿಸಲಾಗಿದ್ದು ಶ್ರೀ ದುರ್ಗಾಮಾತಾ ದೇವಿಯ ಪುನರ್‌ಪ್ರತಿಷ್ಠೆ ಹಾಗೂ ನೂತನವಾಗಿ ಶ್ರೀ ಗಣಪತಿ ದೇವರ ಬಿಂಬ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಸಮಾರಭಕ್ಕೆ ಮಂಗಳವಾರ ಚಾಲನೆ ನೀಡಲಾಗಿದೆ. ಇಜ್ಜ ಶಿವಕ್ಷೇತ್ರದ ವೇದಮೂರ್ತಿ ಶ್ರೀ ಸತ್ಯನಾರಾಯಣ ಭಟ್ ಅವರ ನೇತೃತ್ವದಲ್ಲಿ ಎಪ್ರಿಲ್ 21ರ ವರೆಗೆ ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ವಕೀಲ ಸುರೇಶ್ ಪೂಜಾರಿ ತಿಳಿಸಿದ್ದಾರೆ.

ಸಚಿವರ ಪರಿಶ್ರಮದ ಫಲವಾಗಿ 15 ಲ.ರೂ. ಅನುದಾನ

ಜಾಹೀರಾತು

ಮಂಗಳವಾರ ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇವಸ್ಥಾನಕ್ಕೆ ಆರಾಧನಾ ಸಮಿತಿಯಿಂದ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಪರಿಶ್ರಮದ ಫಲವಾಗಿ 15 ಲಕ್ಷ ರೂ. ಅನುದಾನ ಮಂಜೂರುಗೊಂಡಿದೆ. ಉಳಿದಂತೆ ಸ್ಥಳೀಯರ ಹಾಗೂ ದಾನಿಗಳ ಸಹಕಾರದೊಂದಿಗೆ ಈ ದೇವಸ್ಥಾನವು ಸುಂದರವಾಗಿ ಮೂಡಿಬಂದಿದೆ ಎಂದರು.

 21ರಂದು ಬೆಳಗ್ಗೆ 108 ನಾಲಿಕೆಯರ ಗಣಪತಿ ಹವನ, ಚಂಡಿಕಾಹವನ ನಡೆಯಲಿದ್ದು ಶ್ರೀ ದೇವರಿಗೆ ಬ್ರಹ್ಮಕಲಶಭಿಶೇಕ, ಪಾಯಸ ನೈವೇದ್ಯ ಜರಗಲಿದೆ. ರಾತ್ರಿ ದೀಪಾರಾಧನೆ ಸಹಿತ, ಮಹಾ ಪೂಜೆಯ ನಂತರ ಶ್ರೀ ಕ್ಷೇತ್ರ ಕಟೀಳಿ ಅನಂತ ಪದ್ಮನಾಭ ಅಶ್ರಣ್ಣ ಅವರ ಉಪಸ್ಥಿತಿಯಲ್ಲಿ ಶ್ರೀ ದೇವಿಮಹಾತ್ಮೆ ಯಕ್ಷಗಾಣ ಬಯಲಾಟ ನಡೆಯಲಿದೆ ಎಂದರು.

ಬ್ರಹ್ಮಕಲಶೋತ್ಸವದ ಪ್ರಯುಕ್ತ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ ಧಾರ್ಮಿಕಸಭೆ ನಡೆಯಲಿದ್ದು, ವಿವಿಧ ಕ್ಷೇತ್ರದ ಮಠಾಧೀಶರು ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ. ಸಾಮಾಜಿಕ, ಧಾರ್ಮಿಕ, ರಾಜಕೀಯ ನೇತಾರರು ಕೂಡಾ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೆಯೇ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡಾ ಜರಗಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ಪ್ರವೀಣ್ ಅವರು ತಿಳಿಸಿದ್ದಾರೆ.

ಮುಸ್ಲಿಮ್ ಸಮುದಾಯದ ವ್ಯಕ್ತಿಯೊಬ್ಬರ ಕಾರ್ಯಸಿದ್ಧಿಗಾಗಿ ಅವರು ಹರಕೆಯ ರೂಪದಲ್ಲಿ ಬಜನಾ ಮಂದಿರಕ್ಕೆ ಶ್ರೀ ದುರ್ಗಾಮಾತಾ ದೇವಿಯ ಪಂಚಲೋಹದ ವಿಗ್ರಹವನ್ನು ಕಾನಿಕೆಯಾಗಿ ನೀಡಿದ್ದರು. ಇದಕ್ಕೆ ಪ್ರತಿನಿತ್ಯ ಪೂಜೆ ಪುನಸ್ಕಾರಗಳು ನಡೆಯುತ್ತಿತ್ತು. ಎರಡು ವರ್ಷದ ಹಿಂದೆ ಇಲ್ಲಿ ಅಷ್ಠಮಂಗಳ ಪ್ರಶ್ನೆಯನ್ನಿರಿಸಿದ ಸಂದರ್ಭದಲ್ಲಿ ಕಂಡು ಬಂದಂತೆ ಇದೀಗ ಬಜನಾ ಮಂದಿರವು ದೇವಸ್ಥಾನವಾಗಿ ರೂಪುಗೊಳ್ಳುವಂತಾಗಿದೆ ಎಂದು ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಜನಾರ್ಧನ ಚೆಂಡ್ತಿಮಾರ್ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಸುರೇಶ್ ಕುಲಾಲ್ ನಾವೂರು, ಎಚ್.ಕೆ.ನಯನಾಡು, ನಾರಾಯಣ ಕುಂದರ್ ಪಣೆಕಲ, ವೆಂಕಪ್ಪ ಪೂಜಾರಿ, ರಾಜಿವ ಕಕ್ಕೆಪದವು ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts