ಮಣಿ ಶ್ರೀ ದುರ್ಗಾಮಾತಾ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

 

ದೇವರ ಅನುಗ್ರಹವಿದ್ದಾಗ ಮಾತ್ರ ದೇವಸ್ಥಾನಗಳು ನಿರ್ಮಾಣಗೊಳ್ಳಲು ಸಾಧ್ಯ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಬಂಟ್ವಾಳ ಕಸ್ಬಾ ಗ್ರಾಮದ ಮಣಿ ಶ್ರೀ ದುರ್ಗಾಮಾತಾ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳವಾರ ರಾತ್ರಿ ನಡೆದ ಧಾರ್ಮಿಕ ಸಭೆ ಯಲ್ಲಿ ಅವರು ಆಶೀರ್ವಚನ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ ಇಲ್ಲಿನ ಜನರ ಪರಿಶ್ರಮ ಹಾಗೂ ಕರಸೇವೆಯ ಮೂಲಕ ಈ ಕ್ಷೇತ್ರ ಅಭಿವೃದ್ದಿಗೊಂಡಿದೆ ಎಂದರು. ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಯೋಜನಾ ಪ್ರಾಧಿಕಾರದ ಅಧ್ಯಕ್ ಸದಾಶಿವ ಬಂಗೇರ, ಪುರಸಭೆ ಮಾಜಿ ಅಧ್ಯಕ್ಷೆ ವಸಂತಿ ಚಂದಪ್ಪ. ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಪುರಸಭಾ ಸದಸ್ಯ ಜಗದೀಶ ಕುಂದರ್, ಜನಾರ್ದನ ಚೆಂಡ್ತಿಮಾರ್, ಶ್ರೀನಿವಸ ಗೌಡ ಮಣಿ, ಕೊರಗಪ್ಪ ಮೂಲ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ದೇವಳದ ಶಿಲ್ಪಿ ವಿಶ್ವನಾಥ ಕಾರ್ಕಳ ಹಾಗೂ ಕಾಷ್ಠ ಶಿಲ್ಪಿ ನಾಗೇಶ್ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ಬಿ.ಸ್ವಾಗತಿಸಿದರು, ಜಯಪ್ರಕಾಶ್ ವಂದಿಸಿದರು, ಸಂತೋಷ್ ಕುಮಾರ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.