ತಾಲೂಕು ಪಂಚಾಯಿತಿ ಹಳೇ ಕಟ್ಟಡದ ಜಾಗ ಅಳತೆ ಕಾರ್ಯ ಬುಧವಾರ ಬಿ.ಸಿ.ರೋಡ್ ನಲ್ಲಿ ನಡೆಯಿತು. ಸದ್ಯದಲ್ಲೇ ಇಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಪ್ರಸ್ತಾಪವೊಂದನ್ನು ಈ ಹಿಂದೆ ಸಚಿವ ಬಿ.ರಮಾನಾಥ ರೈ ಮಂಡಿಸಿದ್ದರು. ಅದು ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಲಿದೆ. ಈ ಹಿನ್ನೆಲೆಯಲ್ಲಿ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಇಒ ಸಿಪ್ರಿಯಾನ್ ಮಿರಾಂದಾ , ಸರ್ವೇ ಇಲಾಖೆ ಅಧಿಕಾರಿಗಳು ಜಾಗದ ಅಳತೆ ನಡೆಸಿದರು.