ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ. ಏ. 22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಬೆಳ್ತಂಗಡಿ ಸರ್ಕಾರಿ ಪ್ರವಾಸಿ ಮಂದಿರ, ಮಧ್ಯಾಹ್ನ 2.30 ರಿಂದ 4.30 ರವರೆಗೆ ಬಂಟ್ವಾಳ ಸರ್ಕಾರಿ ಪ್ರವಾಸಿ ಮಂದಿರ, ಏ. 26 ರಂದು ಬೆಳಿಗ್ಗೆ 11 ಗಂಟೆಯಿಂದ 1 ರವರೆಗೆ ಸುಳ್ಯ ಸರ್ಕಾರಿ ಪ್ರವಾಸಿ ಮಂದಿರ, ಮಧ್ಯಾಹ್ನ 2.30 ರಿಂದ 4.30 ಗಂಟೆವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರಕ್ಕೆ ಎಸಿಬಿ ಭೇಟಿ ನೀಡಿ, ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…