ಕರೋಪಾಡಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಹಾಡುಹಗಲೇ ಗ್ರಾಮದ ಜನತೆಗೆ ಬೆಚ್ಚಿಬೀಳುವಂತಹ ಅಹಿತಕರ ಘಟನೆ ನಡೆದಿರುವುದು ಖಂಡನೀಯ. ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾಗಿ ನಿಕಟ ಸಂಪರ್ಕವನ್ನಿರಿಸಿಕೊಂಡಿದ್ದ ಜನಪ್ರತಿನಿಧಿ ಶ್ರೀಯುತ ಅಬ್ದುಲ್ ಜಲೀಲ್ ಇವರು ವಿಧಿವಶರಾಗಿರುವುದು ವಿಷಾಧನೀಯ. ಇವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ.
ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…