ಕ್ವಾಲಿಟಿ ಫ್ರೆಂಡ್ಸ್ ಮಾಣಿ ಇದರ ವತಿಯಿಂದ ಎರಡನೇ ವರ್ಷದ ಕ್ವಾಲಿಟಿ ಕ್ರೀಡೋತ್ಸವ-೨೦೧೭ ಏಪ್ರಿಲ್ 29 ರಂದು ಮಾಣಿ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಹೊನಲು ಬೆಳಕಿನಲ್ಲಿ ನಡೆಯುವ ಈ ಕ್ರೀಡೋತ್ಸವದಲ್ಲಿ ಆಹ್ವಾನಿತ ತಂಡಗಳ ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾಟ, ಮುಕ್ತ ವಿಭಾಗದಲ್ಲಿ ಕ್ರಿಕೆಟ್ ಹಾಗೂ ಹಗ್ಗ-ಜಗ್ಗಾಟ ಪಂದ್ಯಾಟಗಳು ನಡೆಯಲಿದೆ.
ಅಧ್ಯಕ್ಷತೆಯನ್ನು ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ವಹಿಸಲಿದ್ದು, ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಸಚಿನ್ ರೈ ಮಾಣಿಗುತ್ತು ಉದ್ಘಾಟಿಸುವರು. ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ, ಜಿ.ಪಂ. ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಂಜುಳಾ ಮಾವೆ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…