ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಸಯ್ಯದ್ ಮದನಿ ಅವರ ಹೆಸರಲ್ಲಿ ಶೈಕ್ಷಣಿಕ ಚಳುವಳಿಯೇ ನಡೆದಿದ್ದು ಇದೀಗ ಹೆಣ್ಮಕ್ಕಳ ಉನ್ನತ ಶಿಕ್ಷಣದ ದೃಷ್ಟಿ ಇರಿಸಿ ಮಹಿಳಾ ಕಾಲೇಜು ಸ್ಥಾಪಿಸಲು ಹೊರಟಿರುವುದು ಅತ್ಯುತ್ತಮ ಕಾರ್ಯವೆಂದರು.
ಈ ವೇಳೆ ಅನೇಕ ಮಂದಿ ಸಾಧಕರಿಗೆ ರಾಜ್ಯಪಾಲರು ಮದನಿ ಪ್ರಶಸ್ತಿ ಪ್ರದಾನಿಸಿ, ಹಝ್ರತ್ ಮದನಿ ಇಲ್ಮ್ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.
ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಮತ್ತು ಉಳ್ಳಾಲ ದರ್ಗಾದ ಅಧ್ಯಕ್ಷ ಜನಾಬ್ ಹಾಜಿ ಅಬ್ದುಲ್ ರಶೀದ್ ಅವರು ಸಭಾಧ್ಯಕ್ಷತೆ ವಹಿಸಿದ್ದರು. ಆಹಾರ ಸಚಿವ ಯು.ಟಿ ಖಾದರ್, ಮಂಗಳೂರು ಉತ್ತರ ಶಾಸಕ ಮೊಯ್ದಿನ್ ಬಾವಾ, ಯೇನೆಪೋಯ ವಿ.ವಿ ಕುಲಪತಿಗಳಾದ ವೈ.ಅಬ್ದುಲ್ಲಾ ಕುಂಞ, ಉಳ್ಳಾಲ ನಗರಸಭಾಧ್ಯಕ್ಷ ಹುಸೇನ್ ಕುಂಞಮೋನು ಮೊದಲಾದವರು ಇದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಯ್ಯದ್ ಮದನಿ ಬನಾತ್ ಮಹಿಳಾ ಕಾಲೇಜು ಕಟ್ಟಡಕ್ಕೆ ಶಂಕುಸ್ಥಾಪನೆ"
Be the first to comment on "ಸಯ್ಯದ್ ಮದನಿ ಬನಾತ್ ಮಹಿಳಾ ಕಾಲೇಜು ಕಟ್ಟಡಕ್ಕೆ ಶಂಕುಸ್ಥಾಪನೆ"