ಜಿಲ್ಲಾ ಸುದ್ದಿ

ಸಯ್ಯದ್ ಮದನಿ ಬನಾತ್ ಮಹಿಳಾ ಕಾಲೇಜು ಕಟ್ಟಡಕ್ಕೆ ಶಂಕುಸ್ಥಾಪನೆ

ಪ್ರತಿ ಗ್ರಾಮಕ್ಕೂ ತೆರಳಿ ಶಿಕ್ಷಣ ವಂಚಿತ ಹೆಣ್ಮಕ್ಕಳನ್ನು ಶೈಕ್ಷಣಿಕ ದತ್ತು ಸ್ವೀಕರಿಸಿ ಅವರನ್ನು ಸುಶಿಕ್ಷಿತರನ್ನಾಗಿಸುವ ಕಾರ್ಯ ನಮ್ಮ ಸಮಾಜದ ಧನಿಕರು ಮಾಡಬೇಕಾಗಿದೆ ಎಂದು ರಾಜ್ಯಪಾಲ ವಜುಭಾಯಿ ರೂಢಾ ಭಾಯಿವಾಲಾ ಹೇಳಿದರು.

ಜಾಹೀರಾತು

ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್‌ನ 35ನೇ ವರುಷದ ಸಂಭ್ರಮಾಚರಣೆಯ ಪ್ರಯುಕ್ತ ಉಳ್ಳಾಲ ಹಝ್ರತ್ ಶಾಲಾ ವಠಾರದಲ್ಲಿ ನಿರ್ಮಾಣಗೊಳ್ಳಲಿರುವ ಬನಾತ್ ಹೆಣ್ಮಕ್ಕಳ ಕಾಲೇಜು ಕಟ್ಟಡಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಸಯ್ಯದ್ ಮದನಿ ಅವರ ಹೆಸರಲ್ಲಿ ಶೈಕ್ಷಣಿಕ ಚಳುವಳಿಯೇ ನಡೆದಿದ್ದು ಇದೀಗ ಹೆಣ್ಮಕ್ಕಳ ಉನ್ನತ ಶಿಕ್ಷಣದ ದೃಷ್ಟಿ ಇರಿಸಿ ಮಹಿಳಾ ಕಾಲೇಜು ಸ್ಥಾಪಿಸಲು ಹೊರಟಿರುವುದು ಅತ್ಯುತ್ತಮ ಕಾರ್ಯವೆಂದರು.

ಈ ವೇಳೆ ಅನೇಕ ಮಂದಿ ಸಾಧಕರಿಗೆ ರಾಜ್ಯಪಾಲರು ಮದನಿ ಪ್ರಶಸ್ತಿ ಪ್ರದಾನಿಸಿ, ಹಝ್ರತ್ ಮದನಿ ಇಲ್ಮ್ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.

ಜಾಹೀರಾತು

ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಮತ್ತು ಉಳ್ಳಾಲ ದರ್ಗಾದ ಅಧ್ಯಕ್ಷ ಜನಾಬ್ ಹಾಜಿ ಅಬ್ದುಲ್ ರಶೀದ್ ಅವರು ಸಭಾಧ್ಯಕ್ಷತೆ ವಹಿಸಿದ್ದರು. ಆಹಾರ ಸಚಿವ ಯು.ಟಿ ಖಾದರ್, ಮಂಗಳೂರು ಉತ್ತರ ಶಾಸಕ ಮೊಯ್ದಿನ್ ಬಾವಾ, ಯೇನೆಪೋಯ ವಿ.ವಿ ಕುಲಪತಿಗಳಾದ ವೈ.ಅಬ್ದುಲ್ಲಾ ಕುಂಞ, ಉಳ್ಳಾಲ ನಗರಸಭಾಧ್ಯಕ್ಷ ಹುಸೇನ್ ಕುಂಞಮೋನು ಮೊದಲಾದವರು ಇದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ