ಕಳೆದ ಮೂರು-ನಾಲ್ಕು ವರ್ಷಗಳಿಂದೀಚೆಗೆ ಅನಂತಾಡಿಯಲ್ಲಿ ಅಭೂತಪೂರ್ವ ಅಭಿವೃದ್ಧಿ ಕೆಲಸಗಳಾಗಿದ್ದು, ಕ್ಷೇತ್ರದ ಶಾಸಕ ಬಿ.ರಮಾನಾಥ ರೈ ಈ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ಕಾರಣರಾಗಿದ್ದಾರೆ. ಅವರ ಪ್ರಯತ್ನವನ್ನು ಕ್ಷೇತ್ರದ ಜನತೆಗೆ ತಿಳಿಸುವ ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ನಿಜವಾದ ಆಸ್ತಿ ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಹೇಳಿದರು.
ಅನಂತಾಡಿ ವಲಯ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷವನ್ನು ಬೂತ್ ಮತ್ತು ವಲಯ ಮಟ್ಟದಲ್ಲಿ ಸಂಘಟಿಸುವ ಕೆಲಸ ನಿರಂತರವಾಗಿ ನಡೆದಿದ್ದು ಕಾಂಗ್ರೆಸ್ ಪಕ್ಷದ ಇತಿಹಾಸ, ಕಾಂಗ್ರೆಸ್ ಮಾಡಿದ ಕ್ರಾಂತಿಕಾರಿ ಕಾಯಿದೆಗಳು ಸಿಎಂ ಬಿ.ಸಿದ್ದರಾಮಯ್ಯನವರ ಬಡವರ ಬಗ್ಗೆ ಜನಪರ ಕಾಳಜಿಯಿಂದ ಮಾಡಿದ ಕೆಲಸಗಳು, ಕ್ಷೇತ್ರದ ಶಾಸಕರು, ಮಂತ್ರಿಗಳಾದ ಬಿ.ರಮಾನಾಥ ರೈ ಯವರ ಅಭಿವೃದ್ಧಿ ಸಾಧನೆಗಳ ಅರಿವು ಮೂಡಿಸುವ ಕಾರ್ಯ ನಡೆಯಬೇಕು ಎಂದರು.
ತಾಲೂಕು ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಾಧವ ಮಾವೆ ಮಾತನಾಡಿ ಕಾಂಗ್ರೆಸ್ ಪಕ್ಷದ ಋಣ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದ್ದು ಪಕ್ಷ ಸಂಘಟಿಸುವ ಮುಖಾಂತರ ಜನಪರ ಕೆಲಸ ಮಾಡಬೇಕೆಂದರು.
ಸಭೆಯಲ್ಲಿ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಜಯಂತಿ, ವಲಯ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಪೂಜಾರಿ ಉಪಸ್ಥಿತರಿದ್ದರು. ನಾರಾಯಣ ಸಾಲ್ಯಾನ್ ಪ್ರ್ರಾಸ್ತಾವಿಕವಾಗಿ ಮಾತನಾಡಿ ಸತೀಶ್ ಸ್ವಾಗತಿಸಿ ವಂದಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…