ಮೇ.4ರಿಂದ ಪ.ಗೋ. ಅವರ ‘ವಿಶೇಷ ಸೃಷ್ಟಿಗಳ ಲೋಕದಲ್ಲಿ’ ಅಂಕಣ ಆರಂಭ

ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದವರು ಪದ್ಯಾಣ ಗೋಪಾಲಕೃಷ್ಣ (1928-1997). .ಗೋ. ಎಂದೇ ಚಿರಪರಿಚಿತರಾಗಿದ್ದ ಅವರು, ಕನ್ನಡದ ಪ್ರಸಿದ್ಧ ದಿನಪತ್ರಿಕೆಗಳಲ್ಲಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಕೆಲಸ ಮಾಡಿದವರು. ನೇರ, ನಿಷ್ಠುರ ನಡೆಯ ಪ.ಗೋ. ಅವರು ಪತ್ರಕರ್ತನಾಗಿ ವೃತ್ತಿಜೀವನದುದ್ದಕ್ಕೂ ಸಿದ್ಧಾಂತ ಹಾಗೂ ಪ್ರಾಮಾಣಿಕತೆಯ ಹಾದಿ ಹಿಡಿದಿದ್ದರು. ವೃತ್ತಪತ್ರಿಕಾ ಜಗತ್ತಿನ ಎಲ್ಲ ಮುಖಗಳ ಅನುಭವವನ್ನು ವೃತ್ತಿನಿರತ ಪತ್ರಿಕೋದ್ಯೋಗಿಯಾಗಿ ಕಂಡ ನಾನಾ ಮುಖಗಳೂ, ಅನುಭವಿಸಿದ ನೋವು, ನಲಿವುಗಳನ್ನು ನಿರ್ಮೋಹದಿಂದ, ವಸ್ತುನಿಷ್ಠವಾಗಿ ಬರೆದ ವಿಶೇಷ ಸೃಷ್ಟಿಯ ಲೋಕದಲ್ಲಿ ವೃತ್ತಪತ್ರಿಕೆಗಳ ಕಾಲಂ ಸಾಹಿತ್ಯ ಮತ್ತು ಕನ್ನಡ ಸಾಹಿತ್ಯದಲ್ಲಿ ಒಂದು ವಿಶಿಷ್ಟ ಬರವಣಿಗೆಇದು ಪ.ಗೋ. ಆತ್ಮಕತೆಯ ಭಾಗವೂ ಹೌದು.  ಅವರು ಬಂಟ್ವಾಳ ತಾಲೂಕಿನವರೇ ಆಗಿರುವ (ಅಡ್ಯನಡ್ಕ) ಕಾರಣ, ಈ ಅಂಕಣದ ಮೂಲಕ ತಾಲೂಕಿನ ಪ್ರಸಿದ್ಧ ಪತ್ರಕರ್ತರೊಬ್ಬರ ಕೃತಿ ಪರಿಚಯವೂ ಆದಂತಾಗುತ್ತದೆ.

ಪರಿಚಯ:

ಪದ್ಯಾಣ ಗೋಪಾಲಕೃಷ್ಣ ಅವರ ಹುಟ್ಟೂರು ದಕ್ಷಿಣ ಕನ್ನಡ ಮತ್ತು ಈಗಿನ ಕಾಸರಗೋಡು ಜಿಲ್ಲೆಗಳ ಗಡಿಯಂಚಿನಲ್ಲಿರುವ ಅಡ್ಯನಡ್ಕ. 1928ರಲ್ಲಿ ಜನಿಸಿದ ಅವರು 1956ರಲ್ಲಿ ಕನ್ನಡ ದಿನಪತ್ರಿಕೆ  ‘ವಿಶ್ವಕರ್ನಾಟಕ’  ಮುಖಾಂತರ ಬೆಂಗಳೂರಿನಲ್ಲಿಪತ್ರಿಕೋದ್ಯಮಕ್ಕೆ ಪ್ರವೇಶ ಪಡೆದರು. ಮುಂದೆ ತಾಯಿನಾಡು, ಕಾಂಗ್ರೆಸ್ಸಂದೇಶ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದರು. ಮಡಿಕೇರಿಯಿಂದ ಪ್ರಕಟವಾಗುತ್ತಿದ್ದ ‘ಶಕ್ತಿ’ ಪತ್ರಿಕೆಯ ಬೆಂಗಳೂರಿನ ವರದಿಗಾರರಾಗಿದ್ದವರು ಪ.ಗೋ.

1959ರ ಸುಮಾರಿಗೆ ಮಂಗಳೂರಿಗೆ ಬಂದು ನೆಲಸಿ ನವ ಭಾರತ, ಕನ್ನಡವಾಣಿ ಪತ್ರಿಕೆಯಲ್ಲಿ ಉಪಸಂಪಾದಕರಾಗಿಕಾರ್ಯನಿರ್ವಹಿಸಿ, ನಂತರಇಂಡಿಯನ್ಎಕ್ಸ್‌ಪ್ರೆಸ್, ಕನ್ನಡಪ್ರಭ, ಸಂಯುಕ್ತಕರ್ನಾಟಕ, ಟೈಮ್ಸ್ ಆಫ್ ಡೆಕ್ಕನ್ ಮಂಗಳೂರು ವರದಿಗಾರರಾಗಿ ಮುಂದುವರಿದರು. 1963-1964 ರಲ್ಲಿಮಂಗಳೂರಿನಲ್ಲಿತಮ್ಮಸ್ವಂತ ಕನ್ನಡ ದಿನಪತ್ರಿಕೆ “ವಾರ್ತಾಲೋಕ” ದ ವರದಿಗಾರ, ಮುದ್ರಕ ಮತ್ತು ಪ್ರಕಾಶಕರಾಗುವ ಮೂಲಕ, ಪತ್ರಿಕೋದ್ಯಮದ ಎಲ್ಲಾವಿಭಾಗಗಳಲ್ಲಿ ಕಾರ್ಯನಿರ್ವಹಿಸಿದವರು. 1994 ರಲ್ಲಿಕಾರ್ಯನಿರತ ಪತ್ರಿಕೋದ್ಯಮದಿಂದ ನಿವೃತ್ತಿ ಹೊಂದುವ ಮೊದಲು ತಮ್ಮ ಒಂಬತ್ತು ವರ್ಷಗಳನ್ನುಇಂಗ್ಲಿಷ್ ಪತ್ರಿಕಾರಂಗದ ‘ಟೈಮ್ಸ್ಆಫ್ಇಂಡಿಯಾ’ಕ್ಕೆ ಸಲ್ಲಿಸಿ ಪತ್ರಿಕಾರಂಗಕ್ಕೆ ವಿದಾಯ ಹೇಳಿದರೂ ಅಂಕಣ ಬರವಣಿಗೆಯನ್ನುಕೊನೆ ತನಕ ಮುಂದುವರಿಸಿ ದಿನಾಂಕ 10-8-1997ರಂದು ಈ ಪ್ರಪಂಚಕ್ಕೆ ವಿದಾಯಹೇಳಿದರು.