ಬಸವಣ್ಣನ ತತ್ವಾದರ್ಶ, ಚಿಂತನೆಗಳು ಸಾರ್ವಕಾಲಿಕ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಸಮಿತಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶನಿವಾರ ನಡೆದ ಬಸವಣ್ಣ ಜಯಂತಿ ಆಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಜಾತಿ ವ್ಯವಸ್ಥೆ ಪದ್ಧತಿ ಯ ವಿರುದ್ಧ ಕ್ರಾಂತಿಕಾರಿ ಹೋರಾಟ ನಡೆಸಿದವರಲ್ಲಿ ಬಸವಣ್ಣ ಶ್ರೇಷ್ಠ ದಾರ್ಶನಿಕರಾಗಿದ್ದಾರೆ ಎಂದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿ ಸಿಪ್ರಿಯನ್ ಮಿರಾಂದ ಮಾತನಾಡಿ, ಬಸವಣ್ಣ ಚಿಂತನೆಯನ್ನು ಮೈಗೂಡಿಸಲು ವಿದ್ಯಾರ್ಥಿಗಳು ಪ್ರಯತ್ನಿಸಬೇಕೆಂದರು. ಉಪತಹಶೀಲ್ದಾರ್ ಭಾಸ್ಕರ್ ರಾವ್, ಅಪರಾಧ ವಿಭಾಗದ ಪಿಎಸೈ ಗಂಗಾಧರಪ್ಪ, ಪತ್ರಕರ್ತ ಫಾರೂಕ್ ಬಂಟ್ವಾಳ ಶುಭ ಹಾರೈಸಿದರು.
ಈ ಸಂದರ್ಭ ಕಂದಾಯ ನಿರೀಕ್ಷಕರಾದ ರಾಮ.ಕೆ, ದಿವಾಕರ್. ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ, ರಾಷ್ಟ್ರೀಯ ಹಬ್ಬಗಳ ಸಮಿತಿಯ ವಿಷಯ ನಿರ್ವಹಕ ವಿಷುಕುಮಾರ್ ಉಪಸ್ಥಿತರಿದ್ದರು. ತಾಲೂಕು ಕಚೇರಿಯ ಸಿಬ್ಬಂದಿಗಳು. ಗ್ರಾಮ ಕರಣಿಕರು. ಗ್ರಾಮಸಹಾಯಕರು ಹಾಜರಿದ್ದರು. ಕಂದಾಯ ನಿರೀಕ್ಷಕ ನವೀನ್ ಸ್ವಾಗತಿಸಿ, ಗ್ರಾಮ ಕರಣಿಕರ ಸಂಘದ ಜಿಲ್ಲಾ ಅಧ್ಯಕ್ಷ ಜನಾರ್ದನ್ ವಂದಿಸಿದರು.
Be the first to comment on "ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ"