ಬಂಟ್ವಾಳ

ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ

ಬಸವಣ್ಣನ ತತ್ವಾದರ್ಶ, ಚಿಂತನೆಗಳು ಸಾರ್ವಕಾಲಿಕ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು.


ರಾಷ್ಟ್ರೀಯ ಹಬ್ಬಗಳ ಸಮಿತಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶನಿವಾರ ನಡೆದ ಬಸವಣ್ಣ ಜಯಂತಿ ಆಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಜಾತಿ ವ್ಯವಸ್ಥೆ ಪದ್ಧತಿ ಯ ವಿರುದ್ಧ ಕ್ರಾಂತಿಕಾರಿ ಹೋರಾಟ ನಡೆಸಿದವರಲ್ಲಿ ಬಸವಣ್ಣ ಶ್ರೇಷ್ಠ ದಾರ್ಶನಿಕರಾಗಿದ್ದಾರೆ ಎಂದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿ ಸಿಪ್ರಿಯನ್ ಮಿರಾಂದ ಮಾತನಾಡಿ, ಬಸವಣ್ಣ ಚಿಂತನೆಯನ್ನು ಮೈಗೂಡಿಸಲು ವಿದ್ಯಾರ್ಥಿಗಳು ಪ್ರಯತ್ನಿಸಬೇಕೆಂದರು. ಉಪತಹಶೀಲ್ದಾರ್ ಭಾಸ್ಕರ್ ರಾವ್, ಅಪರಾಧ ವಿಭಾಗದ ಪಿಎಸೈ ಗಂಗಾಧರಪ್ಪ, ಪತ್ರಕರ್ತ ಫಾರೂಕ್ ಬಂಟ್ವಾಳ ಶುಭ ಹಾರೈಸಿದರು.


ಈ ಸಂದರ್ಭ ಕಂದಾಯ ನಿರೀಕ್ಷಕರಾದ ರಾಮ.ಕೆ, ದಿವಾಕರ್. ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ, ರಾಷ್ಟ್ರೀಯ ಹಬ್ಬಗಳ ಸಮಿತಿಯ ವಿಷಯ ನಿರ್ವಹಕ ವಿಷುಕುಮಾರ್ ಉಪಸ್ಥಿತರಿದ್ದರು. ತಾಲೂಕು ಕಚೇರಿಯ ಸಿಬ್ಬಂದಿಗಳು. ಗ್ರಾಮ ಕರಣಿಕರು. ಗ್ರಾಮಸಹಾಯಕರು ಹಾಜರಿದ್ದರು. ಕಂದಾಯ ನಿರೀಕ್ಷಕ ನವೀನ್ ಸ್ವಾಗತಿಸಿ, ಗ್ರಾಮ ಕರಣಿಕರ ಸಂಘದ ಜಿಲ್ಲಾ ಅಧ್ಯಕ್ಷ ಜನಾರ್ದನ್ ವಂದಿಸಿದರು.

ಜಾಹೀರಾತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.