ಬಂಟ್ವಾಳ

ಮೇ 6, 7 ರಂದು ಕುಕ್ಕಾಜೆಯಲ್ಲಿ ದಕ್ಷಿಣ ಭಾರತ ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟ

ದಕ್ಷಿಣ ಭಾರತ ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟ ಬಂಟ್ವಾಳ ತಾಲೂಕಿನ ಮಂಚಿ ಕುಕ್ಕಾಜೆ ಶಾಲಾ ಮೈದಾನದಲ್ಲಿ ಮೇ 6 ಮತ್ತು 7ರಂದು ನಡೆಯಲಿದೆ.

ವಲಯ ಕಾಂಗ್ರೆಸ್ ಸಮಿತಿ ಮಂಚಿ, ನವಯುಗ ಸ್ಪೋರ್ಟ್ಸ್ ಕ್ಲಬ್ ಕುಕ್ಕಾಜೆ, ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಶನ್, ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇದರ ಜಂಟಿ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಜನ್ಮ ಶತಾಬ್ಧಿ ಪ್ರಯುಕ್ತ ನಡೆಯುವ ಕಬಡ್ಡಿ ಪಂದ್ಯಾಟಲ್ಲಿ ಪ್ರಮುಖರು ಭಾಗವಹಿಸುವರು ಎಂದು ಕಬಡ್ಡಿ ಸಂಘಟನಾ ಸಮಿತಿಯ ಅಧ್ಯಕ್ಷ ಎಂ.ಎಸ್.ಮುಹಮ್ಮದ್ ತಿಳಿಸಿದರು.

ಬಿ.ಸಿ.ರೋಡ್ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡಿಸ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸುವರು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪಂದ್ಯಾಟಕ್ಕೆ ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಆಹಾರ ಸಚಿವ ಯು.ಟಿ.ಖಾದರ್, ಮೀನುಗಾರಿಕಾ ಸಚಿವ ಪ್ರಮೋದ್ ಮದ್ವರಾಜ್, ಎಐಸಿಸಿ ವಿಭಾಗೀಯ ಸಂಚಾಲಕ ಡಾ. ವಿಷ್ಣುಪ್ರಸಾದ್, ಶಾಸಕರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಐವನ್ ಡಿಸೋಜ, ಶಕುಂತಲಾಶೆಟ್ಟಿ, ವಸಂತ ಬಂಗೇರ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷ ದಿವ್ಯಪ್ರಭ ಗೌಡ, ಮಕ್ಕಳ ರಕ್ಷಾಣಾ ಆಯೋಗದ ಅಧ್ಯಕ್ಷೆ ಕೃಪ ಅಮರ್ ಆಳ್ವ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ಡಿಸಿಸಿ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ವಿಶೇಷ ಅಹ್ವಾನಿತರಾಗಿ ತುಳು ಚಿತ್ರ ನಟರಾದ ದೇವದಾಸ ಕಾಪಿಕಾಡ್, ನವೀನ್ ಡಿ. ಪಡೀಲ್ ಮತ್ತಿತರರು ಭಾಗವಹಿಸಲಿರುವರು ಎಂದು ತಿಳಿಸಿದರು.

ಕಬಡ್ಡಿ ಸಂಘಟನಾ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಅಲಿ ಮಾತನಾಡಿ, ವಿಜೇತ ತಂಡಕ್ಕೆ ಪ್ರಥಮ ಬಹುಮಾನ 1 ಲಕ್ಷ ರೂ. ನಗದು, ದ್ವಿತೀಯ ಬಹುಮಾನ 70 ಸಾವಿರ ರೂ. ನಗದು, ತೃತೀಯ ಮತ್ತು ಚತುರ್ಥ 40 ಸಾವಿರ ರೂ. ನಗದು ಹಾಗೂ ಇಂದಿರಾ ಗಾಂಧಿ ಟ್ರೋಪಿ ನೀಡಲಾಗುವುದು. ಭಾರತ ಕಬಡ್ಡಿ ತಂಡವನ್ನು ಪ್ರತಿನಿಧಿಸುವ 15ರಿಂದ 20 ಮಂದಿ ಆಟಗಾರರು ವಿವಿಧ ತಂಡದಲ್ಲಿ ಭಾಗವಹಿಸಲಿದ್ದಾರೆ. ರೈಲ್ವೆ, ಮಿಲಿಟರಿ, ಆಂಧ್ರ, ತಮಿಳುನಾಡು, ಸಹಿತ ಅಹ್ವಾನಿತ ಎಂಟು ತಂಡಗಳು ಈ ಪಂದ್ಯಾಕೂಟದಲ್ಲಿ ಭಾಗವಹಿಸಲಿದೆ. ಒಟ್ಟು 15 ಪಂದ್ಯಾಟ ನಡೆಯಲಿದೆ ಎಂದು ಹೇಳಿದರು. ಸಮಿತಿಯ ಮುಖ್ಯ ಸಲಹೆಗಾರರಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಪದಾಧಿಕಾರಿಗಳಾದ ಇಬ್ರಾಹಿಂ ಜಿ.ಎಂ., ಡಿ.ಕೆ.ಹಂಝ, ಹಸೈನಾರ್ ಪಿ.ಕೆ., ಶ್ರೀಪತಿ ರಾವ್ ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ