ಬಂಟ್ವಾಳ

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯರಾಗಿ ಪಿಯುಸ್ ರೋಡ್ರಿಗಸ್ ನೇಮಕ

www.bantwalnews.com report
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರೇತರ ಸದಸ್ಯರನ್ನಾಗಿ ಮೂರು ವರ್ಷಗಳ ಕಾಲಾವಧಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಯುಸ್ ಎಲ್. ರೋಡ್ರಿಗಸ್ ಅವರನ್ನು ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಲಾಗಿದೆ.
ಮೈಸೂರಿನ ವೆಂಕಟರಾಮ, ಬೆಳಗಾವಿಯ ಸುರೇಶ್ ಗುರಪ್ಪ ತಳವಾರ ಮತ್ತು ದ.ಕ. ಜಿಲ್ಲೆಯ ಪಿಯುಸ್ ಅವರನ್ನು ಮಂಡಳಿಯ ಅಧಿಕಾರೇತರ ಸದಸ್ಯರನ್ನಾಗಿ ನೇಮಿಸಿ ಮೂರು ವರ್ಷಗಳ ಕಾಲಾವಧಿಗೆ ಈ ಕೂಡಲೇ ಜಾರಿಗೆ ಬರುವಂತೆ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಪಿಯುಸ್ ಅವರು ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಾಗಿ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts