ದಾರಿಮೀಸ್ ಎಸೋಸಿಯೇಶನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಧ್ಯಯನ ಶಿಬಿರ ಹಾಗೂ ಆಧ್ಯಾತ್ಮಿಕ ಮಜ್ಲಿಸ್ ಕಾರ್ಯಕ್ರಮ ಮೇ.10ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 3ರ ತನಕ ಪಾಣೆಮಂಗಳೂರು, ನೆಹರೂನಗರ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ದ.ಕ.ದಾರಮೀಸ್ ಅಧ್ಯಕ್ಷ ಕೆ.ಬಿ.ಅಬ್ದುಲ್ ಖಾದರ್ ದಾರಿಮಿ ತಿಳಿಸಿದರು.
ಬಿ.ಸಿ.ರೋಡ್ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ದ.ಕ.ಮುಶಾವರ ಅಧ್ಯಕ್ಷ ಸಯ್ಯಿದ್ ಎನ್.ಪಿ.ಎಂ. ಝೈನುಲ್ ಆಬಿದೀನ್ ತಂಙಳ್ ಉದ್ಘಾಟಿಸಲಿದ್ದು, ದ.ಕ.ಜಿಲ್ಲಾ ಖಾಝಿ ತ್ವಖಾ ಅಹ್ಮದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸುವರು. ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಶೈಖುನಾ ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲ್ ದುವಾ ನೆರವೇರಿಸುವರು ಎಂದರು.
ಕಾರ್ಯಕ್ರಮದಲ್ಲಿ ನೆಹರೂನಗರ ಜುಮಾ ಮಸೀದಿ ಅಧ್ಯಕ್ಷ ಹಾಜಿ ಪಿ.ಎಸ್. ಅಬ್ದುಲ್ ಹಮೀದ್, ಕರ್ನಾಟಕ ರಾಜ್ಯ ದಾರಿಮಿ ಉಲಮಾ ಒಕ್ಕೂಟದ ಅಧ್ಯಕ್ಷ ಎಸ್.ಬಿ.ಮಹಮ್ಮದ್ ದಾರಿಮಿ, ಮೌಲಾನ ಮುಹಮ್ಮದ್ ಸಲೀಂ ದಾರಿಮಿ ಮಲಪ್ಪುರಂ, ಬಿ.ಕೆ.ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ, ಕೋಟೆಕಾರ್ ಮುದರ್ರಿಸ್ ಹಾರೂನ್ ಅಹ್ಸನಿ, ಉಳ್ಳಾಲ ಜುಮಾ ಮಸೀದಿ ಖತೀಬ್ ಶಮೀಮ್ ಸಖಾಫಿ, ಕೋಟೇಕಾರ್ ಸಹ ಮುದರಿಸ್ ಝೈನ್ ಸಖಾಫಿ ಮೊದಲಾದವರು ಭಾಗವಹಿಸುವರು ಎಂದವರು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ದಾರಿಮೀಸ್ ಸಂಚಾಲಕ ಅಬ್ದುಲ್ ಶುಕೂರ್ ದಾರಿಮಿ, ಎಸ್‌ಕೆಎಸ್‌ಎಸ್‌ಎಫ್ ಮುಡಿಪು ಕ್ಲಸ್ಟರ್ ಅಧ್ಯಕ್ಷ ಜಾಫರ್ ಶರೀಫ್ ಮುಸ್ಲಿಯಾರ್, ಎಸ್‌ವೈಎಸ್ ಜಿಲ್ಲಾ ಕಾರ್ಯದರ್ಶಿ ಪಿಎಂ ಅಬ್ದುಲ್ ಹಕೀಂ ಪರ್ತಿಪ್ಪಾಡಿ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…