ಯುವಕನೊಬ್ಬ ಮನೆಯ ಹಿಂದಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನರಿಕೊಂಬು ಗ್ರಾಮದ ಮೊಗರ್ನಾಡು ಎಂಬಲ್ಲಿನ ಶೇಖರ ಮೂಲ್ಯ ಎಂಬವರ ಮಗ ದೀಪಕ್ (24) ಸಾವನ್ನಪ್ಪಿದ ಯುವಕ. ಈತ ಮಂಗಳೂರಿನಲ್ಲಿ ಮರದ ಕೆಲಸಕ್ಕೆಂದು ಪ್ರತಿದಿನ ತೆರಳುತ್ತಿದ್ದು, ವಾರದಿಂದ ಖಿನ್ನತೆಯಿಂದ ಬಳಲುತ್ತಿದ್ದ. ಬುಧವಾರ ರಜೆ ಎಂದು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದ ದೀಪಕ್, ಎಲ್ಲರೂ ಹೊರಹೋದ ಮೇಲೆ ಮನೆ ಪಕ್ಕದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ನೇಣು ಬಿಗಿದು ಯುವಕ ಆತ್ಮಹತ್ಯೆ"