ಗುರುವಾರ ಬೆಳಗ್ಗೆ ಸುಮಾರು 1.30ರ ವೇಳೆಗೆ ಕಲ್ಲಡ್ಕದಲ್ಲಿ ನಡೆದ ಅಪಘಾತದಲ್ಲಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.
www.bantwalnews.com report
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಮೀನು ಸಾಗಾಟದ ಖಾಲಿ ಕಂಟೈನರ್ ಮಾಣಿ ಕಡೆಗೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕಿನಲ್ಲಿದ್ದ ಸಂಬಂಧಿಕರಾದ ಹರೀಶ ನಾಯ್ಕ(26), ರಕ್ಷಿತ್ ಕುಮಾರ್ (11) ಮತ್ತು ನಾರಾಯಣ(40) ಸಾವನ್ನಪ್ಪಿದ್ದಾರೆ.
ಹರೀಶ ನಾಯ್ಕ ಪೆರಾಜೆ ಗ್ರಾಮದ ಪಾಲ್ಯ ನಿವಾಸಿ ಈಶ್ವರ ನಾಯ್ಕ ಎಂಬವರ ಪುತ್ರ. ಇವರು ಸೆಂಟರಿಂಗ್ ಕೆಲಸ ಮಾಡಿಕೊಂಡಿದ್ದವರು. ಮೃತಪಟ್ಟ ನಾರಾಯಣ ಹರೀಶ ಅವರ ಅಕ್ಕನ ಗಂಡ. ಹಾಗೂ ರಕ್ಷಿತ್ ಕುಮಾರ್ ಹರೀಶ್ ಅವರ ಸಹೋದರನ ಮಗ.
ಮೂವರೂ ಕಾರ್ಕಳ ಸಮೀಪ ಈಶ್ವರ ದೇವಸ್ಥಾನದಲ್ಲಿ ನಡೆಯುತ್ತಿದ್ದ ಜಾತ್ರೆಯಲ್ಲಿ ಪಾಲ್ಗೊಂಡು ಬೈಕ್‌ನಲ್ಲಿ ವಾಪಸ್ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಂಗಳೂರಿಗೆ ತೆರಳುತ್ತಿದ್ದ ಮೀನು ಸಾಗಾಟದ ಖಾಲಿ ಕ್ಯಾಂಟರ್ ಬೈಕ್‌ಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಲಾರಿ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.
ಬೈಕ್ ಚಲಾಯಿಸುತ್ತಿದ್ದ ಹರೀಶ್ ನಾಯ್ಕ ಸ್ಥಳದಲ್ಲೇ ಮೃತಪಟ್ಟರೆ ಗಂಭೀರ ಗಾಯಗೊಂಡಿದ್ದ ನಾರಾಯಣ ಮತ್ತು ರಕ್ಷಿತ್ ಆಸ್ಪತ್ರೆಗೆ ಸಾಗಿಸಿದ ಬಳಿಕ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
IFTAAR ORGANISED BY FORMER MINISTER RAMANATHA RAI AT PANEMANGALORE (more…)