ವಿಟ್ಲದ ವಿಠಲ ಪ್ರೌಢ ಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 78.21 ಫಲಿತಾಂಶ ದಾಖಲಿಸಿಕೊಂಡಿದೆ.
ಒಟ್ಟು 358 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 280 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 29 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಮಲ್ಲಿಕಾ 595 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿ ಮೂಡಿ ಬಂದರೆ, 580 ಅಂಕ ಪಡೆದಿರುವ ಫಾತಿಮತ್ ಶಿಫಾ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸಂಸ್ಕೃತದಲ್ಲಿ ಶರಣ್ಯ 100 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾಳೆ. ಮೊದಲ ಬಾರಿಗೆ ತುಳು ಭಾಷೆ ಕಲಿಸಲಾಗಿದ್ದು, 29 ವಿದ್ಯಾರ್ಥಿಗಳಲ್ಲಿ 29 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 100 ಫಲಿತಾಂಶ ದಾಖಲಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ ಮಾಹಿತಿ ನೀಡಿದ್ದಾರೆ.