ಫರಂಗಿಪೇಟೆ ಎಪಿಎಲ್ ಲೀಗ್ ಕ್ರಿಕೆಟ್ ಪಂದ್ಯಾಕೂಟಕ್ಕೆ ಚಾಲನೆ

ಪುದು ವಲಯ ಯುವ ಕಾಂಗ್ರೆಸ್ ವತಿಯಿಂದ ಫರಂಗಿಪೇಟೆ ನೇತ್ರಾವತಿ ನದಿ ಕಿನಾರೆಯಲ್ಲಿ ಶನಿವಾರದಿಂದ 5 ದಿನಗಳ ಕಾಲ ನಡೆಯುವ ಎಪಿಎಲ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ರಾಜ್ಯ ಆಹಾರ ಸಚಿವ ಯು.ಟಿ.ಖಾದರ್ ಬ್ಯಾಟಿಂಗ್ ಮಾಡುವುದರ ಮೂಲಕ ಉದ್ಘಾಟಿಸಿದರು.

ಜಾಹೀರಾತು

ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ಉಮರ್ ಫಾರೂಕ್, ಯು.ಟಿ.ಖಾದರ್‌ರವರು ಶಾಸಕರಾಗಿ, ಸಚಿವರಾಗಿ ಆಯ್ಕೆಯಾದ ಬಳಿಕ ಪುದು ಗ್ರಾಮದ ಅಭಿವೃದ್ಧಿಗೆ ಯಾವುದೇ ಕೊರತೆ ಆಗಿಲ್ಲ. ಸಚಿವರ ಮುತುವರ್ಜಿಯಿಂದ ಗ್ರಾಮದ ಎಲ್ಲ ರಸ್ತೆಗಳು ಕಾಂಕ್ರಿಟ್ ರಸ್ತೆಯಾಗಿ ಅಭಿವೃದ್ಧಿಗೊಂಡಿದೆ. ಎಂಐಎಂ ಯೋಜನೆಯಡಿ ಕುಂಜತ್ಕಲದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಹಾಗೂ ಒಳ ಚರಂಡಿ, ಪೇರಿಮಾರಿನಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಈಗಾಗಲೇ ಆಗಿದೆ. ಗ್ರಾಮ ವಿಕಾಶ ಯೋಜನೆಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಪುದು ಗ್ರಾಮಕ್ಕೆ ಉತ್ತಮ ಅನುದಾನ ನೀಡುವ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಫರಂಗಿಪೇಟೆ ಜಂಕ್ಷನ್‌ನಿಂದ ಕ್ರೀಡೆ ನಡೆಯುವ ಮೈದಾನದವರೆಗೆ ಕ್ರೀಡಾ ಜಾಥ ನಡೆಯಿತು. ವೇದಿಕೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ಉದ್ಯಮಿ ಗಿರೀಶ್ ಬೆಂಗಳೂರು, ಪುದು ಗ್ರಾಪಂ ಅಧ್ಯಕ್ಷ ಆತಿಕಾ, ಉಪಾಧ್ಯಕ್ಷ ಮುಹಮ್ಮದ್ ಹಾಶೀರ್, ತಾಪಂ ಸದಸ್ಯೆ ಪ್ರದ್ಮಶ್ರೀ ದುರ್ಗೇಶ್ ಶೆಟ್ಟಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಮುಹಮ್ಮದ್ ಬಾವ, ಸಿ.ಎಂ.ಫಾರೂಕ್, ರಿಯಾಝ್ ಪಾವೂರು, ಮುಸ್ತಫಾ ಪಾವೂರು, ಇಮ್ತಿಯಾಝ್ ಆಲ್ಫಾ, ಇಬ್ರಾಹೀಂ ತುಂಬೆ, ಪ್ರವೀಣ್ ತುಂಬೆ, ರವೂಫ್, ಆಸಿಫ್ ಮೇಲ್ಮನೆ, ಗ್ರಾಪಂ ಸದಸ್ಯರಾದ ಲತೀಫ್, ಝಾಹಿರ್, ರಮ್ಲಾನ್, ಇಮ್ರಾನ್ ಸುಜೀರ್, ಗ್ರಾಪಂ ಮಾಜಿ ಅಧ್ಯಕ್ಷ ಅಖ್ತರ್ ಹುಸೈನ್, ಸಲೀಂ, ಮುಸ್ತಫಾ ಅಮೆಮಾರ್, ಅನ್ಸಾರ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
ಜಾಹೀರಾತು
ಜಾಹೀರಾತು

Be the first to comment on "ಫರಂಗಿಪೇಟೆ ಎಪಿಎಲ್ ಲೀಗ್ ಕ್ರಿಕೆಟ್ ಪಂದ್ಯಾಕೂಟಕ್ಕೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*