ಬಂಟ್ವಾಳ

ಹೋಲಿ ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ ಅಗ್ರಾರ್ ಗೆ ಶೇ.100 ಫಲಿತಾಂಶ

ಬಂಟ್ವಾಳ ಅಗ್ರಾರ್ ನಲ್ಲಿರುವ ಹೋಲಿ ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ ಸತತ ಮೂರನೇ ಬಾರಿ ಶೇ.100 ಫಲಿತಾಂಶವನ್ನು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ದಾಖಲಿಸುವ ಮೂಲಕ ಹ್ಯಾಟ್ರಿಕ್ ಸಾಧಿಸಿದೆ.

ಜಾಹೀರಾತು

ಶಾಲೆ ಆರಂಭವಾದಂದಿನಿಂತಲೂ ಫಲಿತಾಂಶ ಶೇ.100 ಲಭಿಸುತ್ತಿದೆ. ಈ ಬಾರಿ ಏಳು ಮಂದಿ ಡಿಸ್ಟಿಂಕ್ಷನ್, 14 ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರೆ, ನಾಲ್ವರು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.  ಫಿವಾನ್ ಲೀಜರ್ ಡಿಸೋಜ 612 ಅಂಕ (ಶೇ.97.92) ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ. ಸ್ವೀಡ್ಲ್ ವಿವಾ ರೋಡ್ರಿಗಸ್ 598 ಅಂಕ (ಶೇ.95.68) ಮತ್ತು ಪ್ರಾರ್ಥನಾ ಜೆ. ಶೆಟ್ಟಿ 581 (ಶೇ.92.96) ಅಂಕ ಗಳಿಸಿದ್ದಾರೆ. ಉತ್ತಮ ಸಾಧನೆ ತೋರಿ ತೇರ್ಗಡೆಯಾದ ಎಲ್ಲ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕ ಫಾ. ಗ್ರೆಗರಿ ಡಿಸೋಜ,, ಆಡಳಿತ ಸಮಿತಿ, ಮುಖ್ಯೋಪಾಧ್ಯಾಯರು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಹಾಗೂ ಶಿಕ್ಷಕ ರಕ್ಷಕ ಸಮಿತಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts