ಮಾಣಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯಕಾರಿಣಿ ಸಭೆಯಲ್ಲಿ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ಜನರಿಗೆ ತಿಳಿಸಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ನೀಡಲಾಯಿತು.
ಪಕ್ಷ ಪ್ರಮುಖರಾದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಕೇಂದ್ರ ಸಾಧನೆ ಹಾಗೂ ರಾಜ್ಯದ ವೈಫಲ್ಯವನ್ನು ಜನರಿಗೆ ತಿಳಿಸುವುದು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಸಮರೋಪ ಕಾರ್ಯಕ್ರಮದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಪಕ್ಷಕ್ಕೆ ನೀಡಿದ ಕೊಡುಗೆಗಳನ್ನು ತಿಳಿಸಿದರು.ವೇದಿಕೆಯಲ್ಲಿ ಮಂಡಲದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಜಿಲ್ಲಾ ಉಪಾಧ್ಯಾಕ್ಷರಾದ ಜಿ.ಆನಂದ, ಜಿಲ್ಲಾ ಕಾರ್ಯದರ್ಶಿ ಸುಗುಣ ಕಿಣಿ, ಜಿಲ್ಲಾ ವಕ್ತಾರರಾದ ವಿಕಾಸ್ ಪುತ್ತೂರು, ಜೀತೇಂದ್ರ ಕೊಟ್ಟಾರಿ, ಎಸ್.ಸಿ. ಮೋರ್ಚಾದ ಅಧ್ಯಕ್ಷರಾದ ದಿನೇಶ್ ಅಮ್ಟೂರು, ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…