ಮಹಿಳೆಯೊಬ್ಬರ ಕೈಯಲ್ಲಿ ನಗದು, ಚಿನ್ನ, ಮೊಬೈಲ್ ಫೋನ್ ಇದ್ದ ಚೀಲವನ್ನು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು ಎಳೆದು ಪರಾರಿಯಾದ ಆತಂಕಕಾರಿ ವಿದ್ಯಮಾನ ತುಂಬೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಜಾಹೀರಾತು
ತುಂಬೆ ರಾಮಲ್‌ಕಟ್ಟೆ ನಿವಾಸಿ ವನಿತ ಬೆಳಗ್ಗೆ ಬಿ.ಸಿ.ರೋಡಿನ ಬ್ಯಾಂಕೊಂದಕ್ಕೆ ತೆರಳಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ.. ತುಂಬೆ ಜಂಕ್ಷನ್‌ನಲ್ಲಿ ಬಸ್‌ನಿಂದ ಇಳಿದು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ರಾಮಲ್‌ಕಟ್ಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು ಮಹಿಳೆಯ ಕೈಯಲ್ಲಿದ್ದ ಚೀಲವನ್ನು ಎಗರಿಸಿ ಪರಾರಿಯಾಗಿದ್ದಾರೆ. ಚೀಲದಲ್ಲಿ 2500 ರೂಪಾಯಿ ನಗದು, 4500 ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಒಂದು ಮೊಬೈಲ್ ಫೋನ್ ಇತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಹಾಡಹಗಲೇ ಮಹಿಳೆಯ ಬ್ಯಾಗ್ ಸೆಳೆದೊಯ್ದ ಆಗಂತುಕರು"