ಬಂಟ್ವಾಳ ಪೇಟೆ ಅಗಲಕಿರಿದಾಗಿರುವುದು ತನಗೂ ತಿಳಿದಿದೆ. ಈ ಕುರಿತು ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಲಾಗುವುದು. ಕಾನೂನು ಪ್ರಕಾರ ಕೈಗೊಳ್ಳುವ ನಿರ್ಧಾರಕ್ಕೆ ನನ್ನ ಆಕ್ಷೇಪವಿಲ್ಲ ಎಂದು ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳದಲ್ಲಿ ಪೇಟೆ ರಸ್ತೆ ಅಗಲೀಕರಣ ಮಾಡುವಂತೆ ಒತ್ತಾಯಿಸಿ ಬಂಟ್ವಾಳದ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ಹಾಗೂ ಕೆಲ ವರ್ತಕರು ಸಚಿವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂದರ್ಭ ನೀಡಿದ ಮನವಿಗೆ ಸ್ಪಂದಿಸಿದ ಸಚಿವ ರೈ, ಈ ಕುರಿತು ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳುವರು ಎಂದು ಹೇಳಿದರು.
ಈ ಸಂದರ್ಭ ವಿಶ್ವನಾಥ ಚೆಂಡ್ತಿಮಾರ್, ಪುರಸಭಾ ಸದಸ್ಯ ಪ್ರವೀಣ್ ಬಿ., ಜನಾರ್ದನ ಚೆಂಡ್ತಿಮಾರ್ ಸಹಿತ ಪ್ರಮುಖರು ಹಾಜರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…